ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ವಿಚಾರಣೆ ಇಂದು ನಡೆಯಲಿದ್ದು, 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಎ೨ ಆಗಿರುವ ನಟ ದರ್ಶನ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಈ ವೇಳೆ ದರ್ಶನ್ ಪರ ವಕೀಲರು ಷರತ್ತುಗಳ ಸಡಿಲಿಕೆಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಈ ಹಣ್ಣಿಗೆ ಹೃದಯಾಘಾತ ತಡೆಯೋ ಶಕ್ತಿ ಇದೆ.. ವಾರದಲ್ಲಿ ಒಮ್ಮೆಯಾದರೂ ತಪ್ಪದೇ ಸೇವಿಸಿ!
ಹೈಕೋರ್ಟ್ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದ್ದರೂ, ಕೆಲವೊಂದು ಕಟ್ಟುನಿಟ್ಟಾದ ಷರತ್ತುಗಳನ್ನು ವಿಧಿಸಿತ್ತು. ಇದೀಗ, ಅಂತಹ ಷರತ್ತುಗಳನ್ನು ಸಡಿಲಿಸುವಂತೆ ಸಿಆರ್ ಪಿಸಿ 439(1)(ಬಿ) ಅಡಿಯಲ್ಲಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.
ನಟ ದರ್ಶನ್ ಈ ನಡುವೆ “ಡೆವಿಲ್” ಚಿತ್ರ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಶೂಟಿಂಗ್ ಗಾಗಿ ವಿದೇಶಕ್ಕೆ ತೆರಳಬೇಕಿರುವ ಕಾರಣ, 57ನೇ ಸಿಸಿಹೆಚ್ ನ್ಯಾಯಾಲಯದಿಂದ ವಿದೇಶ ಪ್ರವಾಸಕ್ಕೆ ಅನುಮತಿ ಪಡೆದಿದ್ದಾರೆ. ಶೀಘ್ರದಲ್ಲೇ ವಿದೇಶ ಪ್ರವಾಸ ಕೈಗೊಳ್ಳಲಿರುವ ದರ್ಶನ್, ಇದೀಗ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಭಾಗವಹಿಸುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.