ಡೆಹ್ರಾಡೂನ್:– ಉತ್ತರಾಖಂಡದಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹದಿಂದ 9 ಕಾರ್ಮಿಕರು ನಾಪತ್ತೆಯಾದ ಘಟನೆ ಜರುಗಿದೆ. ಉತ್ತರಾಖಂಡದಲ್ಲಿ ಮೇಘಸ್ಫೋಟಗೊಂಡು ಹಠಾತ್ ಪ್ರವಾಹ ಉಂಟಾದ ಪರಿಣಾಮ ಉತ್ತರಕಾಶಿ ಬಳಿ ನಿರ್ಮಾಣ ಹಂತದ ಹೋಟೆಲ್ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ.
ಕಾರ್ಮಿಕರು ಪ್ರಹಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇನ್ನು ಭಾರೀ ಮೇಘಸ್ಫೋಟದಿಂದ ಚಾರ್ಧಾಮ್ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ, ಭದ್ರಿನಾಥ ಯಾತ್ರೆ ಸ್ಥಗಿತಗೊಂಡಿದೆ.