ಬೆಂಗಳೂರು: ನಾನು ಎಂದಿಗೂ ಕನ್ನಡ ಮಾತಾಡಲ್ಲ, ಹಿಂದಿಯಷ್ಟೇ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಂಗಳೂರು ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ನಡೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.
The behaviour of the SBI Branch Manager in Surya Nagara, Anekal Taluk refusing to speak in Kannada & English and showing disregard to citizens, is strongly condemnable.
We appreciate SBI’s swift action in transferring the official. The matter may now be treated as closed.…
— Siddaramaiah (@siddaramaiah) May 21, 2025
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬ್ಯಾಂಕ್ ಸಿಬ್ಬಂದಿ ಜನರ ಜೊತೆ ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಬೇಕು. ಎಸ್‌ಬಿಐ ಶಾಖಾ ವ್ಯವಸ್ಥಾಪಕರು ಕನ್ನಡ ನಿರಾಕರಿಸಿ ನಾಗರಿಕರನ್ನು ಕಡೆಗಣಿಸಿರುವುದು ತೀವ್ರವಾಗಿ ಖಂಡನೀಯ. ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಎಸ್‌ಬಿಐನ ತ್ವರಿತ ಕ್ರಮವನ್ನು ಪ್ರಶಂಸಿಸುತ್ತೇವೆ. ಅಂತಹ ಘಟನೆಗಳು ಮರುಕಳಿಸಬಾರದು.
ಬಿಯರ್ ಕುಡಿದರೆ ಕಿಡ್ನಿ ಸ್ಟೋನ್ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!
ಎಲ್ಲಾ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನ ಘನತೆಯಿಂದ ನಡೆಸಿಕೊಳ್ಳಬೇಕು. ಗ್ರಾಹಕರ ಜೊತೆ ಸ್ಥಳೀಯ ಭಾಷೆಯಲ್ಲಿ ಮಾತನಾಡುವ ಪ್ರಯತ್ನ ಮಾಡಬೇಕು. ಬ್ಯಾಂಕ್ ಸಿಬ್ಬಂದಿ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನಾ ತರಬೇತಿ ಕಡ್ಡಾಯಗೊಳಿಸಬೇಕು. ಸ್ಥಳೀಯ ಭಾಷೆಯನ್ನು ಗೌರವಿಸುವುದು ಎಂದರೆ ಜನರನ್ನು ಗೌರವಿಸುವುದು ಎಂದರ್ಥ ಎಂದು ಹೇಳುತ್ತಾ ಕೇಂದ್ರ ಹಣಕಾಸು ಇಲಾಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಕನ್ನಡಪರ ಸಂಘಟನೆಗಳು SBI ಹೆಡ್ ಆಫೀಸ್ ಜನರಲ್ ಮ್ಯಾನೇಜರ್ ಸುಶೀಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು. ಇದೀಗ ಕನ್ನಡಿಗರ ಹೋರಾಟಕ್ಕೆ ಮಣಿದು ಕನ್ನಡ ಮಾತಾಡಲ್ಲ ಎಂದಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ವರ್ಗಾವಣೆ ಮಾಡಲಾಗಿದೆ.