ಬೆಂಗಳೂರು: ಕರುನಾಡಿನ ಹೆಮ್ಮೆಯ ಲೇಖಕಿ ಹಾಸನದ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ.
ಇನ್ನೂ ಬಾನು ಮುಷ್ತಾಕ್ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು.
ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು… pic.twitter.com/o4hjTNiQvR
— Siddaramaiah (@siddaramaiah) May 21, 2025
ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು. ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ.
ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ `ಹೃದಯ ದೀಪ’ವನ್ನು ಇಂಗ್ಲಿಷ್‌ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.