Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ: ಸಿಎಂ ಸಿದ್ದರಾಮಯ್ಯ

    By AIN AuthorApril 24, 2025
    Share
    Facebook Twitter LinkedIn Pinterest Email
    Demo

    ಚಾಮರಾಜನಗರ : ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    ಇಂದು ಮಲೆ ಮಹದೇಶ್ವರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಉಗ್ರರನ್ನು ಮಟ್ಟ ಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ.  ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್ ಘಟನೆ ಅತ್ಯಂತ  ಖಂಡನೀಯವಾದ ಹಾಗೂ ಅಮಾನುಷವಾದ ಘಟನೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತು ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎಂದರು.

    ಉಗ್ರರನ್ನು ಹಾಕಲು ಎಲ್ಲ ಸಹಕಾರ

    ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು. ಪುಲ್ವಾಮಾ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು.ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು.ಉಗ್ರರು ಯಾವುದೇ ಧರ್ಮ ಜಾರಿಗೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಸರ್ಕಾರದ ಜವಾಬ್ದಾರಿ ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು  ನಾವು, ನಮ್ಮ ಸರ್ಕಾರ ಪಕ್ಷ ಕೊಡುತ್ತದೆ ಎಂದರು. ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ಪೋ ಲೀಸ್ ಗೌರವದಿಂದ ಅಂತ್ಯಕ್ರಿಯೆ ನಡೆಯಲಿದೆ ಎಂದರು.

     

    ಕೇಂದ್ರ ಸರ್ಕಾರದ ರಾಜಕೀಯ ದ್ವೇಷ

    ಬಜೆಟ್ ನಲ್ಲಿ ಜಿಲ್ಲೆಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯ ನಂತರ ಮಾತನಾಡುವುದಾಗಿ ತಿಳಿಸಿದರು. ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಿದರೆ ತಕ್ಷಣವೇ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಬಗ್ಗೆ ಪ್ರಧಾನಿ ,ಗೃಹ ಸಚಿವರನ್ನು ಭೇಟಿ ಮಾಡಿದ್ದರೂ ಏನು ಆಗಿಲ್ಲ. ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಅನುದಾನವನ್ನು ಕೊಡುತ್ತಿಲ್ಲ. 2023-24 ರಲ್ಲಿ  ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ  5300 ಕೋಟಿ ಅನುದಾನವನ್ನು ಈವರೆಗೆ ಕೊಟ್ಟಿಲ್ಲ. ಇದು ರಾಜಕೀಯ ದ್ವೇಷದಂತೆ ಕಾಣುತ್ತದೆ ಎಂದರು.

     

    ಚಾಮರಾಜನಗರ ಜಿಲ್ಲೆಯ ಪ್ರಮುಖ ಯೋಜನೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಹಾಗು ಚಾಮರಾಜನಗರ ಜಿಲ್ಲೆಗೆ ಅಗತ್ಯವಿರುವ ಪ್ರಮುಖ ಯೋಜನೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗುವುದು ಎಂದರು

     

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

    June 22, 2025

    ಸೈಬರ್​ ಕ್ರೈಂ: ಬೆಳಗಾವಿ ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ: ಆದ್ರೆ ಯಾರು ಬಿಟ್ಟು ಕೊಡ್ತಾರೆ? – HD ಕುಮಾರಸ್ವಾಮಿ!

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಹಾಸನದಲ್ಲೊಂದು ವಿದ್ರಾವಕ ಘಟನೆ: ಹೆಂಡತಿ ಊಟ ಬಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಗಂಡ ಸಾವು!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ರಾತ್ರೋರಾತ್ರಿ ಆಸ್ಪತ್ರೆಗೆ ನುಗ್ಗಿ ಮೊಬೈಲ್ ಕಳ್ಳತನ: ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಗಿಲ್ಲ ಭದ್ರತೆ..ರೋಗಿಗಳ ಗೋಳಾಟ!

    June 22, 2025

    ಅಂಗಡಿ-ಹೋಟೇಲ್ ಗೆ ಕನ್ನ ಹಾಕಿದ ಖದೀಮರು: ಗಲ್ಲದಲ್ಲಿದ್ದ ಹಣ, ಸಿಗರೇಟ್ ದೋಚಿ ಎಸ್ಕೇಪ್!

    June 22, 2025

    ಕಟ್ಟಡದ ಮೇಲಿಂದ ಬಿದ್ದ ಟವರ್; ಮನೆಗೆ ಹಾನಿ..ತಪ್ಪಿದ ಅನಾಹುತ !

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.