ಚಾಮರಾಜನಗರ : ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ವಿಜೇತ, ನಟ ಸಾರ್ವಭೌಮ, ವರನಟ ಡಾ.ರಾಜಕುಮಾರ್ ರವರ 97 ನೇ ಹುಟ್ಟುಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾ.ರಾಜ್‌ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರಬೆಟ್ಟದಲ್ಲಿ ನಡೆದ ಸಂಪುಟ ಸಭೆ ಮುಕ್ತಾಯ ಬಳಿ ನಡೆದ ಮಾಧ್ಯಮ ಸುದ್ದಿಗೋಷ್ಟಿಯ ವೇಳೆಯಲ್ಲಿ ಡಾ.ರಾಜಕುಮಾರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ: ಸಿಎಂ ಸಿದ್ದರಾಮಯ್ಯ
ಈ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಹೆಚ್‌ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ವೆಂಕಟೇಶ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಆರ್.ಮಂಜುನಾಥ್, ಶಾಸಕ ಸಿ.ಪುಟ್ಟರಂಗಶೆಟ್ಟಿ , ತಿಮ್ಮಯ್ಯ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸ್‌ಪಿ ಕವಿತಾ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಭಾಗಿಯಾಗಿದ್ದರು.