ಬೆಂಗಳೂರು: ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಹಣ ನೀಡಿದವರಿಗಷ್ಟೇ ಮನೆ ಮಂಜೂರು ಸಿಗುತ್ತಿದೆ ಅಂತಾ ಕಾಂಗ್ರೆಸ್ ಶಾಸಕ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ.
ಇದರ ಬೆನ್ನಲ್ಲೇ ಶಾಸಕ ಬಿಆರ್ ಪಾಟೀಲ್ ಅವರಿಗೆ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ದಾರೆ. ಪಕ್ಷಕ್ಕೆ ಮುಜುಗರವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಬಿ.ಆರ್.ಪಾಟೀಲ್ಗೆ ಖುದ್ದು ಫೋನ್ ಮಾಡಿ ಜೂ.25ರ ಸಂಜೆ ಬೆಂಗಳೂರಿನಲ್ಲಿ ಭೇಟಿಯಾಗುವಂತೆ ಸೂಚಿಸಿದ್ದಾರೆ.
ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ?
ಕಳೆದ ವರ್ಷ ವಾಲ್ಮೀಕಿ ನಿಗಮದ ಹಗರಣ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇದು ಸಿದ್ದರಾಮಯ್ಯ ಸರ್ಕಾರಕ್ಕೆ ಮುಜುಗರ ಕೂಡ ಉಂಟು ಮಾಡಿತ್ತು. ಈಗ ಬಿ.ಆರ್.ಪಾಟೀಲ್, ತಮ್ಮ ಸರ್ಕಾರದಲ್ಲಿನ ಭ್ರಷ್ಟಾಚಾರ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡಿ ಸಿದ್ದರಾಮಯ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ.
ವಸತಿ ಇಲಾಖೆ ಭ್ರಷ್ಟಾಚಾರ ಬಗ್ಗೆ ಮಾತನಾಡಿದ್ದ ಬಿ.ಆರ್ ಪಾಟೀಲ್ ಇದೀಗ ಮೈನಾರಿಟಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನ ಬಿಚ್ಚಿಟ್ಟಿದ್ದಾರೆ. ಇದು ಸಿದ್ದರಾಮಯ್ಯ ಸರ್ಕಾರಕ್ಕೆ ಇನ್ನಿಲ್ಲ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿಸಿದೆ.