ಮೈಸೂರು: ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಜಮೀರ್ ಮಗ, ರಿಜ್ವಾನ್ ಮಗ, ಮುಖ್ಯ ಕಾರ್ಯದರ್ಶಿ ಮಗಳು,
ಸಿಎಂ ನಿಮ್ಮ ಮೊಮ್ಮಗನಿಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಿದ್ರಾ? ಆಂಧ್ರದಲ್ಲಿ ನಟ ಅಲ್ಲು ಅರ್ಜುನ್ನನ್ನು ಕಾಲ್ತುಳಿತ ಪ್ರಕರಣದಲ್ಲೇ ಅರೆಸ್ಟ್ ಮಾಡಿದ್ರು. ಈಗ ಇಲ್ಲಿ ಸಿಎಂ ಅರೆಸ್ಟ್ ಆಗುತ್ತಾರಾ? ಡಿಸಿಎಂ ಅರೆಸ್ಟ್ ಆಗುತ್ತಾರಾ?
ನಿತ್ಯ ಮೊಸರಿಗೆ ಈ ಪುಡಿ ಬೆರೆಸಿ ತಿಂದ್ರೆ ವಾರದಲ್ಲೇ ಕರಗುತ್ತೆ ಬೊಜ್ಜು! ನೀವು ಒಮ್ಮೆ ಟ್ರೈ ಮಾಡಿ!
ಗೃಹಮಂತ್ರಿ ತಲೆದಂಡ ಆಗುತ್ತಾ? ಯಾರು ಇದಕ್ಕೆ ಹೊಣೆ ಹೇಳಿ. ತಿಪ್ಪೆ ಸಾರಿಸಲು ತನಿಖೆಗೆ ಆದೇಶ ಮಾಡಲಾಗಿದೆ. ಇದರಿಂದ ಯಾವ ಪ್ರಯೋಜನ ಇಲ್ಲ. ಕರ್ನಾಟಕ ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಟೀಕಿಸಿದ್ದಾರೆ.
ಡಿಸಿಎಂ ಶಾಲು, ಗ್ಲಾಸ್ ಹಾಕಿಕೊಂಡು ಪೋಸ್ ಕೊಟ್ಟಿದ್ದೆ ಕೊಟ್ಟಿದ್ದು. ಅದನ್ನು ಬಿಟ್ಟು ಯಾವ ತಯಾರಿಯೂ ನಡೆದಿರಲಿಲ್ಲ. ವಿರಾಟ್ ಕೊಹ್ಲಿ ಫೋನ್ ಮಾಡಿ ಇವತ್ತೆ ಬಂದು ಬಿಡ್ತೀನಿ ಪ್ರೋಗ್ರಾಂ ಮಾಡಿ ಅಂದಿದ್ರಾ? ನಿಮಗೆ ಮರುದಿನವೇ ಕಾರ್ಯಕ್ರಮ ಮಾಡುವ ಒತ್ತಡ ಏನಿತ್ತು ಹೇಳಿ? ರೋಡ್ ಶೋ ಮಾಡಿದ್ದರೆ ಲಕ್ಷಾಂತರ ಜನ ನೋಡುತ್ತಿದ್ದರು. ಸರ್ಕಾರಕ್ಕೆ ಮಿನಿಮಮ್ ಕಾಮನ್ಸೆನ್ಸ್ ಇದ್ದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ತರಾಟೆ ತೆಗೆದುಕೊಂಡರು.