ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ ಸಂವಿಧಾನ ತಿದ್ದುಪಡಿ ಮಾಡಿರೋದು ಕಾಂಗ್ರೆಸ್ʼನವರು ಎಂದು ಡಿಎಸ್ ಎಸ್ಸಿ ಘಟಕದ ಅಧ್ಯಕ್ಷ, ಮಾಜಿ ಶಾಸಕ ಅನ್ನದಾನಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಿಕೆಶಿ ಡಿಸಿಎಂ ಆಗೋಕೆ ಸಂವಿಧಾನ ಕಾರಣ. ಬಾರಿ ಸ್ವಾತಂತ್ರ್ಯ ಬಂದಾಗಿನಿಂದ ಸಂವಿಧಾನ ತಿದ್ದುಪಡಿ ಮಾಡಿರೋದು ಕಾಂಗ್ರೆಸ್‌ನವರು. ನರೇಂದ್ರ ಮೋದಿ ಅವರು ಒಂದೇ ಒಂದು ಅರ್ಟಿಕಲ್ ತಿದ್ದಿಲ್ಲ.
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
ನೆಹರು, ಇಂದಿರಾಗಾಂಧಿ, ಮನಮೋಹನ್ ಸಿಂಗ್ ಸಂವಿಧಾನ ತಿದ್ದುಪಡಿ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ ಏನ್ ಮಾಡ್ತಿದ್ದೀರಾ? ಡಿಕೆ ಶಿವಕುಮಾರ್ ಹೇಳಿಕೆ ಬಗ್ಗೆ ಮಾತಾಡಿ, ಮುಸ್ಲಿಮರಿಗೆ ಮೀಸಲಾತಿ ಕೊಡಲು ಸಂವಿಧಾನ ಬದಲಾವಣೆ ಮಾಡ್ತೀನಿ ಅಂತ ಹೇಳಿದ್ದಾರೆ. ಈ ಬಗ್ಗೆ ಮಾತಾಡಿ ಅಂತ ಪ್ರಿಯಾಂಕ್ ಖರ್ಗೆಗೆ ಆಗ್ರಹ ಮಾಡಿದ್ರು.
ಡಿಕೆಶಿ ಹೇಳಿಕೆ ಖಂಡಿಸಿ ಜೆಡಿಎಸ್ SC ಘಟಕದಿಂದ ಪ್ರತಿಭಟನೆ ಮಾಡಲಾಗುತ್ತದೆ. ಶುಕ್ರವಾರ ರಾಜ್ಯಾದ್ಯಂತ ಹೋರಾಟ ಮಾಡ್ತೀವಿ. ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು. ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆದು ರಾಜೀನಾಮೆ ಕೊಡಬೇಕು ಅಂತ ಆಗ್ರಹ ಮಾಡಿದ್ರು.
ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದ್ದಕ್ಕೆ ಟಿಕೆಟ್ ಬಿಜೆಪಿ ಕೊಡದೇ ಇರೋದು ನಾವು ಒಪ್ಪುತ್ತೇವೆ. ಬಿಜೆಪಿ ಶಿಸ್ತುಕ್ರಮ ನಾವು ಸ್ವಾಗತ ಮಾಡ್ತೀನಿ. ಅದೇ ರೀತಿ ಡಿಕೆಶಿವಕುಮಾರ್ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಅಂತ ಆಗ್ರಹ ಮಾಡಿದ್ರು.