ಬೆಂಗಳೂರು:- ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ ಎಂದು HD ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.
IPL 2025: ಇಂದು ಕೆಕೆಆರ್ ವಿರುದ್ಧ ಬಲಿಷ್ಠ ಟೀಂ ಕಣಕ್ಕೆ.. ಆರ್ಸಿಬಿ ತಂಡದಲ್ಲಿ ಯಾರೆಲ್ಲಾ ಇರ್ತಾರೆ?
ಈ ಸಂಬಂಧ X ಮಾಡಿರುವ ಅವರು, ಪಹಲ್ಗಾಮ್‌ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣಿಯಷ್ಟೇ ಅಲ್ಲದೇ ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ ಕಾಂಗ್ರೆಸ್ ಪಕ್ಷವು ಸೇನಾಪಡೆಗಳನ್ನು, ಪ್ರಧಾನಿ ಶ್ರೀ ಮೋದಿ ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡು ಎಂದು ಬರೆದುಕೊಂಡಿದ್ದಾರೆ.
ಕಾಂಗ್ರೆಸ್, ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಅದರ ತನ್ನ ಡಿಎನ್‌ಎ ಭಾರತದ್ದೋ ಅಥವಾ ಪಾಕಿಸ್ತಾನದ್ದೋ ಎಂಬುದನ್ನು ಅದುವೇ ಸ್ಪಷ್ಟಪಡಿಸಬೇಕು. ಪಾಕಿಸ್ತಾನ ಸೃಷ್ಟಿಯಾಗಿದ್ದು ಹೇಗೆ? ಅದರಲ್ಲಿ ಕಾಂಗ್ರೆಸ್ ಪಾತ್ರವೇನು? ಎಂಬ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ಆದರೆ, ದೇಶ ವಿಭಜನೆಯಾಗಿ ಏಳೂವರೆ ದಶಕ ಮೀರಿದರೂ ಆ ಪಕ್ಷ ಇನ್ನೂ ಪಾಕಿಸ್ತಾನ ಮನಸ್ಥಿತಿಯಲ್ಲೇ ಇದೆ. ಅಸ್ತಿತ್ವ ಮಾತ್ರ ಭಾರತದಲ್ಲಿ, ಅದರ ಹೃದಯ ಮಾತ್ರ ಪಾಕಿಸ್ತಾನದಲ್ಲಿದೆ. ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ ಆಕ್ರೋಶ ಹೊರಹಾಕಿದ್ದಾರೆ.