ಬೆಂಗಳೂರು:- ಬೆಂಗಳೂರು ಒಡೆಯಲು ಕಾಂಗ್ರೆಸ್ ಮುಂದಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮನೆ ಕಟ್ಟುವ ಯೋಚನೆ ಇದ್ಯಾ!? ಹಾಗಿದ್ರೆ BBMP ರೂಲ್ಸ್ ಫಾಲೋ ಮಾಡಿ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ ಭಿಕ್ಷೆ ಬೇಡಿದ್ದನ್ನು ನೋಡಿದ್ದೇವೆ. ಮುಂಬೈಯಲ್ಲಿನ ಉಗ್ರ ದಾಳಿಯಲ್ಲಿ 175 ಜನರು ಸತ್ತಿದ್ದರು. ಆಗ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಪ್ರತಿಕ್ರಿಯೆ ನೀಡಲೇ ಇಲ್ಲ. ಆದರೆ ಈಗ ಪ್ರಧಾನಿ ಮೋದಿ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಸಿಂಧೂ ನದಿ ಒಪ್ಪಂದಕ್ಕೆ ನಾವು ಸಹಿ ಹಾಕಿಲ್ಲ. ಅದನ್ನು ಪ್ರಧಾನಿ ಮೋದಿ ರದ್ದು ಮಾಡಿದ್ದಾರೆ. ಭಯೋತ್ಪಾದಕ ದಾಳಿಗಳಾದಾಗಲೇ ಕಾಂಗ್ರೆಸ್ ಅದನ್ನು ಮಾಡಬೇಕಿತ್ತು. ಇದನ್ನು ಸಚಿವ ಸಂತೋಷ್ ಲಾಡ್ ಅರಿಯಬೇಕು ಎಂದು ಹೇಳಿದರು.
ಇಡೀ ಜಮ್ಮು ಕಾಶ್ಮೀರ ಪ್ರಧಾನಿ ಮೋದಿಯವರ ಪರವಾಗಿ ನಿಂತಿದೆ. ಅಲ್ಲಿನ ಮುಖ್ಯಮಂತ್ರಿ ಕೂಡ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲಿನ ಅಭಿವೃದ್ಧಿಯನ್ನು ಜನರು ನೋಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು. ಅದನ್ನು ಮರಳಿ ಪಡೆಯುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕಾಂಗ್ರೆಸ್‌ನ ಒಬ್ಬೇ ಒಬ್ಬ ನಾಯಕರು ಈ ಮಾತನ್ನು ಧೈರ್ಯವಾಗಿ ಹೇಳಿಲ್ಲ ಎಂದರು