ಗದಗ: ಪರಮೇಶ್ವರ್ ವಿರುದ್ಧ ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದೆ. ಗೃಹ ಸಚಿವ ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ವಿಚಾರವಾಗಿ ಗದಗನಲ್ಲಿ ಮಾತನಾಡಿದ ಅವರು, ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ.
ಪರಮೇಶ್ವರ್ ವಿರುದ್ಧ ಕಾಂಗ್ರೆಸ್ನ ಒಂದು ಗುಂಪು ದೂರು ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 2013ರಲ್ಲಿ ಡಾ.ಜಿ.ಪರಮೇಶ್ವರ್ರನ್ನು ಸೋಲಿಸಿದ್ದು ಯಾರು? ಡಾ.ಜಿ.ಪರಮೇಶ್ವರ್ರನ್ನು ಇದೇ ಸಿದ್ದರಾಮಯ್ಯ ಸೋಲಿಸಿದ್ದರು.
ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!?
ಚಿನ್ನ ಕಳ್ಳತನ ಸೇರಿ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ಮಾಡುವಂತೆ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದು ಯಾರು? ನಮಗೆ ಪರಮೇಶ್ವರ್ ಮೇಲೆ ಗೌರವ ಇದೆ, ಸಭ್ಯ ರಾಜಕಾರಣಿ. ಏನಾಗಿದೆ ಅನ್ನೋದನ್ನು ಇಡಿ ಅಧಿಕಾರಿಗಳು ಹುಡುಕುತ್ತಿದ್ದಾರೆ ಎಂದರು.