ಚಳ್ಳಕೆರೆ: ಡಿಸೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಪಕ್ಷ ಪತನಗೊಂಡು ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಹಿರಿಯನಾಯಕ, ಲೋಕಸಭಾ ಸದಸ್ಯ ಗೋವಿಂದ ಎಂ.ಕಾರಜೋಳ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಚಳ್ಳಕೆರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ಮಾತ್ರ ಮೋದಿಯವರ ಕೆಲಸ ಕಣ್ಣಿಗೆ ಕಾಣುತ್ತಿಲ್ಲ.
ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಂಡಿಲ್ಲ, ಹಿಂದಿನ ಸರ್ಕಾರದ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳಿಗೆ ಹೊಸ ಹೆಸರಿನಲ್ಲಿ ಉದ್ಘಾಟನೆ ಮಾಡುವ ಸ್ಥಿತಿ ರಾಜ್ಯ ಸರ್ಕಾರದ್ದು. ನಾಡಿನ ಜನರ ಶಾಪದಿಂದ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ.
ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರದ ದಾಹ ದಿನದಿಂದ ದಿನಕ್ಕೆ ಮೀರುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೊಂದಾಣಿಕೆಯಲ್ಲಿ ಬಾರಿ ಅಂತರವಿದ್ದು ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಳ್ಳುವ ಕಾಲ ಹತ್ತಿರ ಬಂದಿದೆ. 2025ರ ಡಿಸೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಪಕ್ಷ ಪತನಗೊಂಡು ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಹೇಳಿದರು.