ಹುಬ್ಬಳ್ಳಿ:- ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಧರ್ಮೀಯ ಯುವಕನೊಬ್ಬ ಯುವತಿಗೆ ಟಾರ್ಚರ್ ನೀಡಿ, ಕೊಲೆಗೆ ಯತ್ನಿಸಿದ್ದಾನೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ: ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?
ಸಂತ್ರಸ್ತೆ ಪ್ಯಾರಾ ಮೆಡಿಕಲ್ ಕೋರ್ಸ್ನಲ್ಲಿ ಓದುತ್ತಿದ್ದಾಳೆ. ಮೊದಲಿನಿಂದಲೂ ಸಂತ್ರಸ್ತೆಗೆ ಸಿರಾಜ್ನ ಪರಿಚಯವಿತ್ತು. ಪ್ರೀತಿಸುವಂತೆ ಸಂತ್ರಸ್ತೆಗೆ ಒತ್ತಾಯ ಮಾಡಿದ್ದು, ಬಳಿಕ ಟಾರ್ಚರ್ ಕೂಡ ನೀಡಿದ್ದ. ಅಲ್ಲದೇ ಸಂತ್ರಸ್ತೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ
ರಂಜಾನ್ ಹಬ್ಬದಂದು ಸಿರಾಜ್ ಹುಬ್ಬಳ್ಳಿಯಲ್ಲಿ ಸಂತ್ರಸ್ತೆ ಓದುತ್ತಿದ್ದ ಕಾಲೇಜಿಗೆ ತೆರಳಿ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಇದೆಲ್ಲದರಿಂದ ತ್ರೀವವಾಗಿ ಮನನೊಂದ ಸಂತ್ರಸ್ತೆ ಕಾಲೇಜಿನ ಹಾಸ್ಟೆಲ್ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಕೆಎಂಸಿ ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗಳ ಈ ಪರಿಸ್ಥಿತಿಯನ್ನು ನೆನೆದು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದು, ಸಿರಾಜ್ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.