ನವದೆಹಲಿ:- ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಹಾಲಿನ ದರ ಏರಿಕೆ ಸಧ್ಯಕ್ಕಿಲ್ಲ: ಇಂದಿನ ಹೈವೋಲ್ಟೇಜ್ ಸಭೆಯಲ್ಲಿ ಏನಾಯ್ತು?
ದೆಹಲಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದ ತಿದ್ದುಪಡಿಯ ಅಗತ್ಯವೂ ಇಲ್ಲ. ಬದಲಾವಣೆಯ ಅನಿವಾರ್ಯತೆಯೂ ಇಲ್ಲ. ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ನೀಡಿರುವುದು ಎಂದರು.
ಸಂವಿಧಾನವನ್ನು ತಿದ್ದುಪಡಿ ತರಲು ಅವಕಾಶವಿದೆಯೇ ಹೊರತು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಬದಲಾವಣೆ ಮಾಡಲು ಬಿಡುವುದೂ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿದ್ದುಪಡಿಯ ಬದಲು ಬದಲಾವಣೆ ಎಂದು ಹೇಳಿರಬಹುದು ಎಂದರು.
ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುವುದೇ ಸಂವಿಧಾನದ ಮುಖ್ಯ ಆಶಯ. ಸಂವಿಧಾನದ ಆಶಯದಂತೆಯೇ ರಾಜ್ಯದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದೆ. ಸಂವಿಧಾನ ಅನುಚ್ಛೇದ 14, 15(4), 16(4) ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಲು ಅವಕಾಶವಿದೆ ಎಂದು ಹೇಳಿದರು