ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಕರುನಾಡಿಗೆ ಮತ್ತೆ ಕೊರೊನಾ ಆತಂಕ ಮನೆ ಮಾಡಿದೆ.
ಕೋವಿಡ್ ಚಿಕಿತ್ಸೆಗೆ ಧಾರವಾಡ ಸಜ್ಜು: ಜಿಲ್ಲಾಸ್ಪತ್ರೆಯ 10ಬೆಡ್‌ಗಳು ಕೋವಿಡ್‌ಗೆ ಮೀಸಲು
ಕಳೆದ ಮೂರು ವರ್ಷದ ಹಿಂದೆ ಜಗತ್ತನೆ ಇನ್ನಿಲ್ಲದ್ದಂತೆ ಕಾಡಿದ್ದ ಕೊರೊನಾ ಈಗ ಮತ್ತೆ ಏಷ್ಯಾದ ಕೆಲ ದೇಶಗಳಲ್ಲಿ ಮತ್ತೆ ಕೊವಿಡ್ ಪ್ರಕರಣಗಳಿಂದ ರಾಜ್ಯದಲ್ಲೂ ಆತಂಕ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಸದ್ಯ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 35ಕ್ಕೆ ಏರಿಕೆಯಾದರೆ, ಈ ಪೈಕಿ ಬಹುತೇಕ ಸೋಂಕಿತರು ಬೆಂಗಳೂರು ನಗರದಲ್ಲಿ 32 ಕೇಸ್ ಕಂಡು ಬಂದಿವೆ.
ಇದೀಗ ನಗರದ ಮಲ್ಲೇಶ್ವರಂನಲ್ಲಿ 45 ವರ್ಷದ ಮತ್ತು ರಾಜಾಜಿನಗರದಲ್ಲಿ 38 ವರ್ಷದ ವ್ಯಕ್ತಿಗೆ ಕೊವಿಡ್ ಪಾಸಿಟಿವ್ ಬಂದಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿದ್ದರೂ ಕೊವಿಡ್ ಪಾಸಿಟಿವ್ ಬಂದಿದ್ದು, ಸದ್ಯ ಕೊವಿಡ್ ಸೋಂಕಿತರು ಹೋಮ್ ಐಸೋಲೇಷನ್ನಲ್ಲಿದ್ದಾರೆ.
ಪಕ್ಕದ ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಕೊವಿಡ್ ಪ್ರಕರಣ ಏರಿಕೆ ಹಿನ್ನಲೆ ರಾಜಧಾನಿ ಬೆಂಗಳೂರಿಗೂ ಟೆನ್ಷನ್ ಶುರುವಾಗಿದೆ. ಸದ್ಯ ರಾಜ್ಯದಲ್ಲಿ 35 ಕೊವಿಡ್ ಸಕ್ರಿಯ ಪ್ರಕರಣಗಳಿವೆ ಬೆಂಗಳೂರು ನಗರದಲ್ಲಿಯೇ 32 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿಯೇ ಕೊವಿಡ್ ಹೆಚ್ಚಳ ಹಿನ್ನಲೆ ಆತಂಕ ಹೆಚ್ಚಾಗಿದೆ.