ಬೆಳಗಾವಿ:- ಬೆಳಗಾವಿ ನಗರದ ಗರ್ಭಿಣಿ ಮಹಿಳೆಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಬೆಳಗಾವಿ ಮಂದಿಯಲ್ಲಿ ಹೆಚ್ಚು ಆತಂಕ ಮನೆ ಮಾಡಿದೆ.
25 ವರ್ಷದ ಗರ್ಭಿಣಿ ಮಹಿಳೆಗೆ ಕೋವಿಡ್ ಪಾಸಿಟಿವ್ ಬಂದಿದೆ. ಗರ್ಭಿಣಿ ಮಹಿಳೆಯೂ ಬೇರೆ ಬೇರೆ ಕಾರಣದಿಂದ ನ್ಯುಮೋನಿಯಾದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಪಾಸಿಟಿವ್ ಗರ್ಭಿಣಿ ಮಹಿಳೆಗೆ ಚಿಕಿತ್ಸೆ.
ಈ ಬಗ್ಗೆ ಬೆಳಗಾವಿ ಡಿಎಚ್ಓ ಡಾ.ಈಶ್ವರ ಗಡಾದಿ ಮಾಹಿತಿ ನೀಡಿದ್ದಾರೆ. ಜೊತೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸರ್ಕಾರದಿಂದ ಗೈಡ್ ಲೈನ್ಸ್ ಬಂದಿದೆ. ಸರ್ಕಾರದ ಸೂಚನೆ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ತಲಾ 05 ಬೆಡ್ ಮೀಸಲು ಇಡಲಾಗಿದೆ. ಕೊರೊನಾ ವೈರಸ್ ಸಂಬಂಧ ಮುಂಜಾಗ್ರತಾ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.