ಬೆಂಗಳೂರು: ಹೋದೆಯಾ ಪಿಶಾಚಿ ಅಂದರೆ, ಬಂದೆ ಗವಾಕ್ಷಿ ಅನ್ನೋ ಗಾದೆ ಮಾತಿನಂತೆ, ಹೋಗೇ ಬಿಡ್ತು ಅಂದುಕೊಂಡಿದ್ದ ಕೊರೊನಾ ಹೆಮ್ಮಾರಿ ಕಾಟ ಮತ್ತೆ ಶುರುವಾಗಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಅಬ್ಬರ ಹೆಚ್ಚುತ್ತಿದೆ. ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಇದು ದೇಶಾದ್ಯಂತ ಹೆಮ್ಮಾರಿ ಅಬ್ಬರ ಶುರುವಾಗುವ ಆತಂಕ ಹೆಚ್ಚಿಸಿದೆ.
ರಾಜ್ಯದಲ್ಲಿ ಒಂದೇ ದಿನ 35 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಬೆಂಗಳೂರಿನಲ್ಲೇ 32 ಕೇಸ್ ವರದಿಯಾಗಿದೆ. ಇದು ಮತ್ತೆ ರಾಜ್ಯದಲ್ಲಿ ಹೆಮ್ಮಾರಿ ಕಾಟ ಶುರುವಾಗುವ ಲಕ್ಷಣಗಳು ಕಾಣಿಸುತ್ತಿದೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಎಚ್ಚೆತ್ತ ರಾಜ್ಯ ಸರ್ಕಾರ, ಶೀಥ-ಜ್ವರ ಇರುವವರಿಗೆ ಕೋವಿಡ್ ಟೆಸ್ಟ್ ಶುರು ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಜತೆಗೆ, ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾರ್ಡ್ ಆರಂಭಿಸಲು ಸಿದ್ಧತೆ ಮಾಡಲಾಗುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ 3 ಮಕ್ಕಳಿಗೆ Corona ಪಾಸಿಟಿವ್: ನಾಳೆಯಿಂದ Covid ಟೆಸ್ಟ್ ಆರಂಭ..!
ಮಾಸ್ಕ್ ಧರಿಸಿ ಜನತಾ ದರ್ಶನ
ಈ ನಡುವೆ, ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರಿನ ತಮ್ಮ ನಿವಾಸದಲ್ಲಿ ಜನತಾ ದರ್ಶನ ನಡೆಸಿ ಜನರಿಂದ ಅಹವಾಲು ಸ್ವೀಕಾರ ಮಾಡಿದ್ರು. ಆದ್ರೆ, ಸಿದ್ದರಾಮಯ್ಯ ಜನತಾ ದರ್ಶನ ವೇಳೆ ಮಾಸ್ಕ್ ಧರಿಸಿದ್ದು, ಕೊರೊನಾ ಆತಂಕದ ಮುನ್ಸೂಚನೆ ಎನ್ನಲಾಗಿದೆ.
ಸಾರ್ವಜನಿಕರು ಸೇರುವ ಕಡೆ ಮಾಸ್ಕ್ ಧರಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದ್ದು, ರಾಜ್ಯದಲ್ಲಿ ಮಾಸ್ಕ್ ಕಡ್ಡಾಯದ ದಿನಗಳು ಹತ್ತಿರವಾಗುತ್ತಿದೆಯಾ ಎಂಬ ಪ್ರಶ್ನೆಗಳು ಮೂಡಿವೆ.