ಬೆಂಗಳೂರು:- ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಗಾಗಿ ಅಂತಿಮ ಹಂತದ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.
ಆಘಾತಕಾರಿ ಘಟನೆ: ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆ!
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂಸಿ ಸುಧಾಕರ್ ಅಧಿಕಾರಿಗಳೊಂದಿಗೆ ಮಂಗಳವಾರ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ನಂದಿಗಿರಿಧಾಮ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳು ಬೆಳಗ್ಗೆ 11:40ಕ್ಕೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗ್ರಾಮಕ್ಕೆ ಆಗಮಿಸಿಲಿದ್ದಾರೆ. ಇನ್ನೂ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆ ನಂದಿ ಗಿರಿಧಾಮದಲ್ಲಿರುವ ಕೆಎಸ್‌ಟಿಡಿಸಿ ಹೋಟೆಲ್‌ನ ಮಯೂರ ಸಭಾಂಗಣಕ್ಕೆ ಹೊಸ ಲುಕ್ ನೀಡಲಾಗಿದೆ.
ಇನ್ನು ನಂದಿಬೆಟ್ಟದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ಭರಪೂರ ಕೊಡುಗೆ ಘೋಷಣೆ ಮಾಡುವ ನೀರೀಕ್ಷೆಯಿದೆ.