ಬೆಂಗಳೂರು:- ಬೆಂಗಳೂರಿನ ಜೆಪಿ ನಗರದಲ್ಲಿ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಕೂದಲು ಸಿಕ್ಕಾಪಟ್ಟೆ ಉದುರುತ್ತಿದೆಯಾ? ಹಾಗಾದ್ರೆ ಈ ಇದನ್ನು ಒಮ್ಮೆ ಟ್ರೈ ಮಾಡಿ!
ಕೃಷ್ಣಮೂರ್ತಿ (81), ರಾಧ (74) ಆತ್ಮಹತ್ಯೆಗೆ ಶರಣಾದ ದಂಪತಿ. ಮನೆಯಲ್ಲಿ ಸೊಸೆ ಮಾಡಿದ ಅಡುಗೆ ಚೆನ್ನಾಗಿರಲ್ಲ ಎಂಬ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಈ ಹಿನ್ನೆಲೆ ವಯಸ್ಸಾದ ತಂದೆ ತಾಯಿಯನ್ನು ಮಗ ಕಳೆದ ತಿಂಗಳು ವೃದ್ಧಾಶ್ರಮಕ್ಕೆ ಸೇರಿಸಿದ್ದ. ಇದರಿಂದ ನೊಂದ ವೃದ್ಧ ದಂಪತಿ ಸೋಮವಾರ ರಾತ್ರಿ ವೃದ್ಧಾಶ್ರಮದಲ್ಲಿ ನೇಣಿಗೆ ಶರಣಾಗಿದ್ದಾರೆ.
ಮಂಗಳವಾರ ಬೆಳಗಿನ ಜಾವ ದಂಪತಿ ಬಾಗಿಲು ತೆಗೆದಿರಲಿಲ್ಲ. ಅನುಮಾನಗೊಂಡ ಆಶ್ರಮದವರು ಬಾಗಿಲು ತೆಗೆಸಿದಾಗ ಘಟನೆ ಬೆಳಕಿಗೆ ಬಂದಿದೆ