ಬೆಂಗಳೂರು:- ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರೈಲ್ವೇ ಇಲಾಖೆಯಿಂದ 5 ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಭಯೋತ್ಪಾದನೆ ಸಹಿಸಲ್ಲ, ಕ್ರಿಕೆಟ್ ಜೊತೆಗಿನ ಪಾಕಿಸ್ತಾನ್ ಸಂಬಂಧ ಬೇಡ: ಸೌರವ್ ಗಂಗೂಲಿ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆಯು ಮಿಷನ್ ಮೋಡ್ ನೇಮಕಾತಿ ಅಭಿಯಾನದಡಿಯಲ್ಲಿ 2014 ರಿಂದ 2024 ರವರೆಗೆ 5.02 ಲಕ್ಷ ಯುವಜನರಿಗೆ ಉದ್ಯೋಗಾವಕಾಶ ನೀಡಿದದರು.
ಪ್ರಧಾನಮಂತ್ರಿಯವರ ಆಶಯದಂತೆ ಉದ್ಯೋಗ ಸೃಷ್ಟಿಯ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲು ರೈಲ್ವೆ ಇಲಾಖೆಯು ವಾರ್ಷಿಕ ನೇಮಕಾತಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2024ರ ಜನವರಿಯಿಂದ ಇದುವರೆಗೆ ರೈಲ್ವೆ ಇಲಾಖೆಯಲ್ಲಿ ಸುಮಾರು 71,000 ಹುದ್ದೆಗಳನ್ನು ಸೃಷ್ಟಿಸಿದ್ದು ಇವುಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಅವರು ಹೇಳಿದರು.
2047ರಲ್ಲಿ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದು, ಅದರಲ್ಲಿ ರಾಷ್ಟ್ರೀಯ ಉದ್ಯೋಗ ಮೇಳವೂ ಒಂದು, ಅದರ ಅಂಗವಾಗಿ 2022ರ ಅಕ್ಟೋಬರ್ ನಲ್ಲಿ ಪ್ರಧಾನಮಂತ್ರಿಯವರು 10 ಲಕ್ಷ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದರು ಎಂದು ಹೇಳಿದರು.
ಭಾರತವು 2025ರಲ್ಲಿ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆಯುವ ಗುರಿ ಹೊಂದಿದ್ದು, 2030ರಲ್ಲಿ 7 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಮಹತ್ವಾಕಾಂಕ್ಷೆ ಹೊಂದಿದೆ. ಈ ನಿಟ್ಟಿನಲ್ಲಿ ನಮ್ಮ ಯುವ ಜನತೆಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಉದ್ಯೋಗಸೃಷ್ಟಿಗೆ ಸರ್ಕಾರ ಆದ್ಯತೆ ನೀಡಿದೆ. ಪ್ರಸಕ್ತ ಬಜೆಟ್ನಲ್ಲಿ ಪ್ರಧಾನಮಂತ್ರಿಯವರ ಪ್ಯಾಕೇಜ್ ಅಡಿಯಲ್ಲಿ ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಇಂಟರ್ನ್ಶಿಪ್ ಯೋಜನೆಗಳನ್ನು ಘೋಷಿಸಿದ್ದು, ಇದರಿಂದ ಸುಮಾರು 4.10 ಕೋಟಿ ಯುವಜನರಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.