ದೇವನಹಳ್ಳಿ:- ಹೆಂಡತಿಯನ್ನು ಕೊಲೆ ಮಾಡಿ ಗಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಜರುಗಿದೆ. ಶಾಮಣ್ಣ (40) ಮತ್ತು ಸುಮಾ (35) ಮೃತ ದುರ್ದೈವಿಗಳು.
ಹೆಂಡತಿಯನ್ನು ಡಂಬಲ್ಸ್ ನಲ್ಲಿ ಹೊಡೆದು ಮೊದಲು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಂತರ ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಾಮಣ್ಣ (40) ಮತ್ತು ಸುಮಾ (35) ಮೃತ ದುರ್ದೈವಿಗಳು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಗಂಡ ಹೆಂಡತಿ ಕಲಹಕ್ಕೆ ಇಬ್ಬರು ಗಂಡು ಮಕ್ಕಳು ಅನಾಥಾರಾಗಿದ್ದಾರೆ. ಕೂಡಲೇ ವಿಜಯಪುರ ಪೋಲಿಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದರು. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಅಸಲಿ ಸತ್ಯ ಪೋಲಿಸರ ತನಿಖೆಯಿಂದ ಹೊರಬರಬೇಕಾಗಿದೆ.