Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಆರ್ ಎಸ್ ಎಸ್ ಎಸ್ ಬಗ್ಗೆ ಟೀಕೆ ; ಪ್ರಿಯಾಂಕ್ ಖರ್ಗೆ ಮೇಲೆ ಹೆಚ್‌ಡಿಕೆ ಕೆಂಡ

    By Author AINJuly 5, 2025
    Share
    Facebook Twitter LinkedIn Pinterest Email
    Demo

    ಮೈಸೂರು: ಆರ್‌ಎಸ್‌ಎಸ್‌ ಬಗ್ಗೆ ಟೀಕಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದರು.. ಮೈಸೂರಿನಲ್ಲಿ ಶನಿವಾರ ನಡೆದ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಸಚಿವರು ಮಾತನಾಡಿದರು. ಈ ವೇಳೆ ಸಂಘದ ಬಗ್ಗೆ ಮಾತನಾಡಿ ಬಾಯಿ ಚಪಲ ತೀರಿಸಿಕೊಳ್ಳುವ ಬದಲು 40 ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ ಮಾಡಿದ್ದೇವೆ ಎಂಬುದನ್ನು ಮೊದಲು ಹೇಳಲಿ ಎಂದು ಚಾಟಿ ಬೀಸಿದರು.

    ಆರ್ ಎಸ್ ಎಸ್ ಅನ್ನು ಬಂದ್ ಮಾಡುವುದಿರಲಿ, ಈಗ ಕಾಂಗ್ರೆಸ್ ಪಕ್ಷವೇ ಎಲ್ಲಾ ಕಡೆ ಬಂದ್ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡುತ್ತಿದ್ದಾರೆ. ಮೊದಲು ನಿಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಿ. ಪ್ರಿಯಾಂಕ್ ಖರ್ಗೆ ಅವರು ಬಾಯಿ ಚಪಲಕ್ಕೆ ಮೂಲ ವಿಚಾರಗಳನ್ನ ಮರೆ ಮಾಚಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.

    ಡಿಎಂಕೆ ಮುಲಾಜಿನಲ್ಲಿ ಕಾಂಗ್ರೆಸ್

    ಕಾಂಗ್ರೆಸ್ ನವರಿಗೆ ಮಿತ್ರಪಕ್ಷದ ಮುಲಾಜು ಇದೆ. ಅವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಡಿಎಂಕೆ ಪಕ್ಷವನ್ನು ಎದುರು ಹಾಕಿಕೊಳ್ಳುವ ಅಥವಾ ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ. ತಮಿಳುನಾಡು ಸರ್ಕಾರವನ್ನು ದೈರ್ಯವಾಗಿ ಧಿಕ್ಕರಿಸಿ ಮೇಕೆದಾಟು ಯೋಜನೆ ಕೈಗೆತ್ತಿಗೊಂಡದರೆ ಅದು ಸಾಧ್ಯ ಆಗುತ್ತದೆ ಎಂದು ಸಚಿವರು ಹೇಳಿದರು.

    ಮೇಕೆದಾಟು ಯೋಜನೆ ಕಾಂಗ್ರೆಸ್ ಕೈಯಲ್ಲಿ ಸಾಧ್ಯ ಆಗುವುದಿಲ್ಲ. ತಮಿಳುನಾಡು ಸರ್ಕಾರವನ್ನೇ ಒಪ್ಪಿಸದೆ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ..? ಮೇಕೆದಾಟು ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ ನವರು, ನಾನಲ್ಲ. ಯೋಜನೆ ಮಾಡುತ್ತೇವೆ ಎಂದು ಹೇಳಿದವರು ಮಾಡಬೇಕು ತಾನೇ? ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದರಲ್ಲ, ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ..? ಎಂದು ಅವರು ಕಿಡಿಕಾರಿದರು.

    ಕಾಂಗ್ರೆಸ್ ಪಕ್ಷಕ್ಕೆ ನನ್ನ ಭಯವಿದೆ, ಅದಕ್ಕೆ ನನ್ನ ಟಾರ್ಗೆಟ್

    ಕಾಂಗ್ರೆಸ್ ಪಕ್ಷದವರಿಗೆ ಜನರ ಕೆಲಸ ಮಾಡುವುದು ಬಿಟ್ಟು ರಾಜಕೀಯ ಮಾಡುವುದರಲ್ಲಿ ಹೆಚ್ಚು ಆಸಕ್ತಿ ಇದೆ. ಕಾಂಗ್ರೆಸ್ ಪಕ್ಷಕ್ಕೆ ನನ್ನನ್ನು ಕಂಡರೆ ಭಯ. ನನ್ನೊಬ್ಬನ ಮೇಲೆಯೇ ಆ ಪಕ್ಷಕ್ಕೆ ಅತಿಯಾದ ಭಯವಿದೆ. ಈಗಾಗಿ ಪದೇ ಪದೇ ಕಾಂಗ್ರೆಸ್ ಮುಖಂಡರು ನನ್ನ ಹೆಸರನ್ನು ಜಪ ಮಾಡುತ್ತಿರುತ್ತಾರೆ. ಬಿಜೆಪಿ – ಜೆಡಿಎಸ್ ಜೊತೆಯಾದ ಮೇಲಂತೂ ಕಾಂಗ್ರೆಸ್ ನಾಯಕರಿಗೆ  ನಿದ್ದೆಯೇ ಬರುತ್ತಿಲ್ಲ. ಹೀಗಾಗಿ ನನ್ನ ಮೇಲೆ ಪದೇ ಪದೇ ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ನೇರ ಆರೋಪ ಮಾಡಿದರು.

    ಮುಂದೆ ಕೂಡ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ, ಸಂತೋಷ. ಮುಂದಿನ ಐದು ವರ್ಷ ಅಲ್ಲದಿದ್ದರೆ ಐವತ್ತು ವರ್ಷ ಅವರೇ ಆಳ್ವಿಕೆ ಮಾಡಲಿ. ಮೊದಲು ಜನರು ಹೇಳಿದ ಕೆಲಸ ಮಾಡಿ. ಇಪ್ಪತ್ತು ವರ್ಷ ನಮ್ಮದೇ ಸರ್ಕಾರ ಎಂದವರು ಏನೇನಾದರೂ ಎನ್ನುವುದು ನನಗೆ ಗೊತ್ತಿದೆ. ಮುಂದೆ ಯಾರದ್ದು ಸರ್ಕಾರ ಎಂಬುದನ್ನು ಜನರೇ ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗಾಗಿ ಗಲಾಟೆಗಳೇ ನಡೆಯುತ್ತಿದೆ. ಗಲಾಟೆಯಲ್ಲಿ ಮುಳುಗಿರುವ ಕಾಂಗ್ರೆಸ್ ಪಕ್ಷವನ್ನು ಜನ ಹೇಗೆ ಒಪ್ಪುತ್ತಾರೆ? ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವರು ಟೀಕಾಪ್ರಹಾರ ನಡೆಸಿದರು.

    ಚೆಲುವರಾಯಸ್ವಾಮಿಗೆ ತಿರುಗೇಟು

    ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಸದನಾಗಿ ನಾನು ಎಷ್ಟು ಅನುದಾನ ತಂದಿದ್ದೇನೆ ಎಂಬ ಬಗ್ಗೆ ನನ್ನ ಬಗ್ಗೆ ಟೀಕೆ ಮಾಡಿರುವ ಸಚಿವ ಮಹಾಶಯರು ಮೊದಲು ಮಾಹಿತಿ ಪಡೆದುಕೊಂಡು ಮಾತಾಡಲಿ. ಕೇವಲ ಸಂಸದರ ಅನುದಾನ ತಂದಿದ್ದಾರೆ ಎಂದು ಅವರು ಹೇಳಿದ್ದಾರೆ. ನಾನು ಬರೀ ಸಂಸದರ ನಿಧಿಯಿಂದ ಹಣ ತಂದಿಲ್ಲ. ಬೇರೆ ಬೇರೆ ವಿಶೇಷ ಅನುದಾನಗಳನ್ನೇ ತಂದಿದ್ದೇನೆ. ಮಾಹಿತಿ ಇಲ್ಲದಿದ್ದರೆ ಮಾತನಾಡಬಾರದು. ನಾನು ವಿವಿಧ ಬಾಬ್ತುಗಳಿಂದ ಎಷ್ಟು ಅನುದಾನ ತಂದಿದ್ದೇನೆ ಎಂಬುದನ್ನ ಮೊದಲು ಅವರು ತಿಳಿದುಕೊಳ್ಳಲಿ. ಸಂಸದರ ಅನುದಾನ ಅಲ್ಲದೆ ಸಿಎಸ್ ಆರ್ ಮೂಲದಿಂದಲೂ ಅನುದಾನ ತಂದಿದ್ದೇನೆ ಎಂಬುದು ಮಂಡ್ಯ ಜನತೆಗೆ ಗೊತ್ತಿದೆ. ಸಚಿವರಾದವರಿಗೆ ಮಾಹಿತಿ ಇಲ್ಲದಿದ್ದರೆ ನಾನು ಏನು ಮಾಡಲು ಸಾಧ್ಯ? ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ಕೇಂದ್ರ ಸಚಿವರು ತಿರುಗೇಟು ನೀಡಿದರು.

    ಪೂರ್ವ ನಿಗದಿತ ಸಭೆಗಳ ಕಾರಣಕ್ಕೆ ಬಂದಿಲ್ಲ

    ಸಚಿವರು ಸಭೆಗಳಿಗೆ ನನ್ನನ್ನು ಕರೆದಿಲ್ಲ ಎಂದಲ್ಲ. ನಾನು ಕೇಂದ್ರ ಸಚಿವನಾಗಿದ್ದೇನೆ. ಪೂರ್ವ ನಿಯೋಜಿತವಾಗಿ ಅನೇಕ ಸಭೆಗಳು ನಿಗದಿ ಆಗಿರುತ್ತದೆ. ಬೇರೆ ರಾಜ್ಯಗಳ ಪ್ರವಾಸಗಳು ಕೂಡ ಇರುತ್ತವೆ. ಆದರೂ ನಾನು ಮಂಡ್ಯ ಕ್ಷೇತ್ರಕ್ಕೆ ಆದ್ಯತೆಯ ಮೇರೆಗೆ ಭೇಟಿ ನೀಡುತ್ತಿದ್ದೇನೆ. ನನ್ನ ಪಾಲಿನ ಕೆಲಸಗಳನ್ನು ಯಾವುದೂ ಬಾಕಿ ಉಳಿಸಿಕೊಂಡಿಲ್ಲ. ಇವರು ತರಾತುರಿಯಲ್ಲಿ ಸಭೆಗಳಿಗೆ ಬನ್ನಿ ಎಂದು ಕರೆದಾಗ ಅದಕ್ಕೂ ಮೊದಲೇ ನಿಗದಿ ಆಗಿರುವ ಸಭೆಗಳು ಇರುತ್ತವೆ. ಹೀಗಾಗಿ ಅವರ ಸಭೆಗಳಿಗೆ ಹೋಗಲು ಆಗಿಲ್ಲ ಅಷ್ಟೇ. ಅದರಲ್ಲಿ ಬೇರೆ ಅರ್ಥ ಹುಡುಕುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದರು.

    ದಿಶಾ ಸಭೆಯಲ್ಲಿ ಪಾಲ್ಗೊಂಡ ಸಚಿವರು

    ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಮೈಸೂರು ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ ಅಸಭ್ಯ ಅಧ್ಯಕ್ಷತೆಯನ್ನು ವಹಿಸಿದರು. ಸಭೆಯಲ್ಲಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್, ಶಾಸಕರಾದ ಜಿ.ಡಿ. ಹರೀಶ್ ಗೌಡ, ಶ್ರೀವತ್ಸ, ಮಾಜಿ ಶಾಸಕ ಹಾಗೂ ದಿಶಾ ಸಮಿತಿ ನಾಮನಿರ್ದೇಶಿತ ಸದಸ್ಯ ಅಶ್ವಿನ್ ಕುಮಾರ್,  ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತಿ ಸಿಇಒ ಯುಕೇಶ್, ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿಸಿಪಿ‌ ಸುಂದರರಾಜ್ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗಿಯಾಗಿದ್ದರು.

     

    Demo
    Share. Facebook Twitter LinkedIn Email WhatsApp

    Related Posts

    ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಸೆಸ್ಕ್ ನೌಕರ ಸಾವು

    July 5, 2025

    ತಹಶೀಲ್ದಾರ್ ಕಚೇರಿಗೆ ಕಂದಾಯ ಇಲಾಖೆ ಕಮೀಷನರ್ ದಿಢೀರ್ ಭೇಟಿ

    July 5, 2025

    ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    July 5, 2025

    ಕೊಪ್ಪಳದಲ್ಲಿ ಹೃದಯಾಘಾತಕ್ಕೆ ರಂಗಭೂಮಿ ಕಲಾವಿದ ಬಲಿ

    July 5, 2025

    ಆ್ಯಂಬುಲೆನ್ಸ್ ನಲ್ಲೇ ಹೆರಿಗೆ ; ತಾಯಿ, ಮಗು ಆರೋಗ್ಯ

    July 5, 2025

    ಮೊಹರಂ ಆಚರಣೆ ; ನಿಗಿ ನಿಗಿ ಕೆಂಡದ ಮೇಲೆ ಕುಳಿತು ಭಕ್ತಿ ಪ್ರದರ್ಶನ

    July 5, 2025

    ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

    July 5, 2025

    ಮಾಜಿ ಸ್ಪೀಕರ್ ರಮೇಶ್ ಕುಮಾರ್ ತೋಟದಲ್ಲಿ ಅವಘಡ

    July 5, 2025

    ಟಿಬಿ ಡ್ಯಾಂನಿಂದ 80,000 ಕ್ಯೂಸೆಕ್ಸ್ ನೀರು ಹೊರಹರಿವು ; ಮುಳುಗಡೆ ಭೀತಿಯಲ್ಲಿ ಕಂಪ್ಲಿ ಸೇತುವೆ

    July 5, 2025

    ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರು: ತಪ್ಪಿದ ಅನಾಹುತ!

    July 5, 2025

    ಓವರ್ ಟೇಕ್ ತಂದ ಆಪತ್ತು: ಸ್ಕಿಡ್ ಆಗಿ ಬೈಕ್ ನಿಂದ ಬಿದ್ದ ಸವಾರ Spot Death!

    July 5, 2025

    ಬೆಂಗಳೂರು ಹೊರವಲಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ದೇವಾಲಯ ಪ್ರವೇಶಕ್ಕೆ ದಲಿತರಿಗೆ ನಿರ್ಬಂಧ!

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.