ಹುಬ್ಬಳ್ಳಿ; ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿರುವ ಸಂಸ್ಥಾನ ಹಿರೇಮಠ ಮನಗೂಳಿ ಮಠದಲ್ಲಿ ಕಳೆದ ಮೂರು ದಿನಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಶ್ರೀ ಷ, ಬ್ರ, ಶತಾಯುಷಿ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳ 42 ನೆಯ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಶ್ರೀ ಶ್ರೀ 2008 ಜಗದ್ಗುರು ಡಾ ಮಹಾಂತ ಶಿವಾಚಾರ್ಯರವರ ಮೂರ್ತಿಗಳ ಅಡ್ಡ ಪಲ್ಲಕ್ಕಿ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು,
ಇದೇ ಸಂದರ್ಭದಲ್ಲಿ ಶ್ರೀಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟಗೆ ನೂತನ ಕಾರ್ಯಧ್ಯಕ್ಷರಾಗಿ ನೇಮಕಗೊಂಡಿರುವ ರಾಜಶೇಖರ್ ಮೆಣಸಿನಕಾಯಿ ರವರಿಗೆ ಹರಗುರು ಶರಣರ ಸಮ್ಮುಖದಲ್ಲಿ ಶ್ರೀಯುತರಿಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದರು, ಶ್ರೀ ಷ, ಬ್ರ, ಅಭಿನವ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು ಸಂಸ್ಥಾನ ಹಿರೇಮಠ ಮನಗೂಳಿ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು
ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದ್ರೆ ಸಾಕು ಸಂಪೂರ್ಣ ನಾರ್ಮಲ್ ಆಗುತ್ತೆ ಶುಗರ್ ಲೆವಲ್.!
ಶ್ರೀ ಷ, ಬ್ರ, ವೀರರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಷ, ಬ್ರ, ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಷ ಬ್ರ, ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಷ, ಬ್ರ, ವೀರ ಬಸವದೇವರು ಮಹಾಸ್ವಾಮಿಗಳು ವಹಿಸಿದ್ದರು ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಆಗಮಿಸಿದ್ದರು.