ಐಪಿಎಲ್ ಉದ್ದಕ್ಕೂ ಕಳಪೆ ಪ್ರದರ್ಶನ ತೋರಿಕೊಂಡು ಬಂದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತನ್ನ 12ನೇ ಪಂದ್ಯದಲ್ಲಿ ತನ್ನ ಮೂರನೇ ಗೆಲುವು ದಾಖಲಿಸಿದೆ. ಆ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಲೇ ಆಫ್ ಕನಸಿಗೆ ಬಹುತೇಕ ಕೊಳ್ಳಿ ಇಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕೆಕೆಆರ್ ನಿಗದಿತ 20 ಓವರ್ಗಳಲ್ಲಿ 179 ರನ್ ಗಳಿಸಿತ್ತು.
180 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಸಿಎಸ್ಕೆ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದರೂ ಕೂಡ ಮೊದಲ ಪಂದ್ಯ ಆಡಿದ ಉರ್ವಿಲ್ ಪಟೇಲ್ ಹಾಗೂ ಡಿವಾಲ್ಡ್ ಬ್ರೇವಿಸ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಗೆದ್ದು ಬೀಗಿತು.
ಈ ಗೆಲುವಿನ ಬಳಿಕ ಮಾತನಾಡಿದ ಮಹೇಂದ್ರ ಸಿಂಗ್ ಧೋನಿ, ತಾನು ನಿವೃತ್ತಿ ಅಂಚಿನಲ್ಲಿರುವುದನ್ನು ಬಹಿರಂಗಪಡಿಸಿದ್ದಾರೆ. ಆದರೆ ಅದು ಸದ್ಯಕ್ಕಿಲ್ಲ ಎಂಬುದನ್ನು ಸಹ ಸ್ಪಷ್ಟಪಡಿಸಿದ್ದಾರೆ. ಈಗ ನನಗೆ 43 ವರ್ಷ. ಇದನ್ನು ನೀವು ಮರೆಯಬೇಡಿ ಎಂದು ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.
ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಲು ನೀರಿಗೆ ಒಂದು ಚಿಟಿಕೆ ಈ ಪುಡಿ ಹಾಕಿ ಕುಡಿಯಿರಿ.. ಆಮೇಲೆ ರಿಸಲ್ಟ್ ನೋಡಿ!
ಅಭಿಮಾನಿಗಳಿಂದ ನನಗೆ ಯಾವಾಗಲೂ ಪ್ರೀತಿ ಮತ್ತು ವಾತ್ಸಲ್ಯ ಸಿಕ್ಕಿದೆ. ಹೀಗಾಗಿ ನಾನು ಬಹಳ ಸಮಯದಿಂದ ಆಡುತ್ತಿದ್ದೇನೆ. ಇದಾಗ್ಯೂ ನನಗೆ 43 ವರ್ಷವಾಗಿದೆ ಎಂಬುದು ಅಭಿಮಾನಿಗಳಿಗೆ ಗೊತ್ತಿರಲಿ. ಅವರಲ್ಲಿ ಹಲವರಿಗೆ ನನ್ನ ಕೊನೆಯ ಪಂದ್ಯ ಯಾವಾಗ ಎಂದು ತಿಳಿದಿಲ್ಲ. ಹೀಗಾಗಿಯೇ ಅವರು ನನ್ನ ಆಟವನ್ನು ನೋಡಲು ಬಯಸುತ್ತಿದ್ದಾರೆ.
ನಾನು ನನ್ನ ವೃತ್ತಿಜೀವನದ ಕೊನೆಯ ಹಂತದಲ್ಲಿದ್ದೇನೆ ಎಂಬ ಅಂಶದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ಐಪಿಎಲ್ ಮುಗಿದ ನಂತರ, ನನ್ನ ದೇಹವು ಈ ಒತ್ತಡವನ್ನು ತಡೆದುಕೊಳ್ಳುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಲು ನಾನು ಇನ್ನೂ ಆರರಿಂದ ಎಂಟು ತಿಂಗಳು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ ಎಂದು ಧೋನಿ ಹೇಳಿದ್ದಾರೆ.
ಅಲ್ಲದೆ ಸದ್ಯ ಯಾವುದೇ ನಿವೃತ್ತಿ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಆದರೆ ಈ ಬಾರಿಯ ಐಪಿಎಲ್ ಬಳಿಕ ಮುಂದಿನ ಸೀಸನ್ಗೆ ತನ್ನ ದೇಹ ಹೊಂದಿಕೊಳ್ಳುತ್ತದೆಯೇ ಎಂಬುದರ ಆಧಾರದ ಮೇಲೆ ನಿವೃತ್ತಿ ಬಗ್ಗೆ ಯೋಚಿಸುತ್ತೇನೆ. ಇದಕ್ಕಾಗಿ ಇನ್ನೂ 6 ರಿಂದ 8 ತಿಂಗಳುಗಳಿವೆ. ಹೀಗಾಗಿ ಸದ್ಯ ನಿವೃತ್ತಿ ಘೋಷಿಸುವ ಇರಾದೆಯಿಲ್ಲ ಎಂದು ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.