ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಬಿರುಗಾಳಿ ಬೀಸಿದೆ. ಇಂದಿನಿಂದ, ಸೌರಾಷ್ಟ್ರ ಮತ್ತು ಕಚ್ನ ಕೆಲವು ಪ್ರದೇಶಗಳಲ್ಲಿ ಉಷ್ಣ ಅಲೆಗಳು ತೀವ್ರಗೊಳ್ಳುವ ಸಾಧ್ಯತೆಯಿದೆ. ಅಸ್ಸಾಂನ ಕೆಲವು ಪ್ರದೇಶಗಳಲ್ಲಿ ಇಂದು ಬಿಸಿ ಮತ್ತು ಆರ್ದ್ರ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಒಂದು ಮುತ್ತಿಗೆ 50 ಸಾವಿರ: ಹಣ ವಾಪಸ್ ಕೇಳಿದ್ದಕ್ಕೆ ಹನಿಟ್ರ್ಯಾಪ್ ಬೆದರಿಕೆ, ಶಿಕ್ಷಕಿ ಸೇರಿ ಮೂವರು ಅರೆಸ್ಟ್!
ಬೆಂಗಳೂರಿಗೆ ಮಳೆ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ,
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಏಪ್ರಿಲ್ 4 ವರೆಗೆ ಮಳೆ ಮುನ್ಸೂಚನೆ ನೀಡಲಾಗಿದೆ.