ಮಂಗಳೂರು:- ಮಂಗಳೂರಿನಲ್ಲಿ ಸಾಲು ಸಾಲು ಕೊಲೆಗಳು ಆಗುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.
RCB ಬೌಲರ್ ಗಳ ಆರ್ಭಟ: ಫೈನಲ್ಗೇರಲು ಬೆಂಗಳೂರಿಗೆ ಜಸ್ಟ್ 102 ರನ್ ಗುರಿ!
ಬಂಟ್ವಾಳದಲ್ಲಿ ಅಬ್ದುಲ್ ರಹಿಮ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಹಾಗೂ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಅವರನ್ನು ವರ್ಗಾವಣೆ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರವಾಲ ಅವರನ್ನು ಕ್ರಿಮಿನಲ್ ಇನ್ವೆ,ಸ್ಟಿಗೇಶನ್ ಡಿಪಾರ್ಟ್ ಮೆಂಟ್ ಗೆ ವರ್ಗಾಯಿಸಲಾಗಿದೆ. ಇನ್ನು ಮಂಗಳೂರು ಪೊಲೀಸ್ ನೂತನ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನ ನೇಮಕ ಮಾಡಲಾಗಿದೆ. ಇನ್ನು ಉಡುಪಿ ಎಸ್ಪಿಯಾಗಿದ್ದ ಅರುಣ್.ಕೆ ಅವರನ್ನು ದಕ್ಷಿಣ ಕನ್ನಡ ಪೊಲಿಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. ಇನ್ನೊಂದೆಡೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ಅವರನ್ನ ನೇಮಕ ಮಾಡಲಾಗಿದೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಬೊರಸೆ ಭೂಷಣ್ ನೇಮಿಸಲಾಗಿದೆ.
ವರ್ಗಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು