Close Menu
Ain Live News
    Facebook X (Twitter) Instagram YouTube
    Friday, May 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿ.ಎಂ.ಸಿದ್ದರಾಮಯ್ಯ!

    By AIN AuthorMay 16, 2025
    Share
    Facebook Twitter LinkedIn Pinterest Email
    Demo

    ಮಂಗಳೂರು ಮೇ 16: ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ  ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

    ಬಿಡದಿ ಟೌನ್ ಶಿಪ್ ಯೋಜನೆ ಎಂದರೆ ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ: ಪ್ರತಿಪಕ್ಷ ನಾಯಕ ಆರ್.ಅಶೋಕ!

    ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ ಕಟ್ಟಡವನ್ನು ಪ್ರಜಾರ್ಪಣೆಗೊಳಿಸಿ  ಮಾತನಾಡಿದರು.

    ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗುದ್ದಲಿ ಪೂಜೆ ನೆರವೇರಿಸಿ ಮೊದಲ ಹಂತದ ಕಾಮಗಾರಿಗೆ ಹಣ ಬಿಡುಗಡೆ ಮಾಡಿದ್ದೆವು. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧದ ಕೆಲಸ ನಿಂತು ಹೋಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ಮುಂದುವರೆಯಲೇ ಇಲ್ಲ. ಇದನ್ನು ಪೂರ್ಣಗೊಳಿಸಲು ಮತ್ತೆ ನಾವೇ ಅಧಿಕಾರಕ್ಕೆ ಬರಬೇಕಾಯಿತು. ಬಿಜೆಪಿ ಅವಧಿಯಲ್ಲಿ ಉದ್ಘಾಟನೆ ಆಗಲಿಲ್ಲ ಏಕೆ ಎಂದು ವೇದಿಕೆಯಲ್ಲೇ ಇದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

    ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಡ್ತೀವಿ. ಕೇಂದ್ರ ರಾಜ್ಯಕ್ಕೆ ವಾಪಾಸ್ ಕೊಡುವುದು, ಸ್ಮಾರ್ಟ್ ಸಿಟಿ ಯೋಜನೆ ಸೇರಿ ಕೇವಲ 65 ಸಾವಿರ ಕೋಟಿ. ಶೇ15-16 ರಷ್ಟು ಮಾತ್ರ ವಾಪಾಸ್ ಕೊಡುತ್ತಿದೆ. ಇದು ಕೇಂದ್ರ ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು , ಪ್ರಧಾನಿ ಮೋದಿಯವರಿಗೆ ಹೇಳಿ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ನಿಲ್ಲಿಸಿ ಎಂದು ಶಾಸಕ ಕಾಮತ್ ಅವರಿಗೆ ಕಿವಿ ಮಾತು ಹೇಳಿದರು.

    *ದಕ್ಷಿಣ ಕನ್ನಡ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ: ಸಿಎಂ ಘೋಷಣೆ*

    ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ.‌ ಸಚಿವ ಕೃಷ್ಣಬೈರೇಗೌಡರು ವಿಶೇಷ ಕಾಳಜಿ, ಸಾಕಷ್ಟು ಶ್ರಮ ವಹಿಸಿ ಜಿಲ್ಲೆಯನ್ನು ಪೋಡಿಮುಕ್ತ ಮಾಡುವ ದಿಕ್ಕಿನಲ್ಲಿ ಕೆಲಸಗಳು ಆಗಿವೆ ಎಂದು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.‌

    ಮನುಷ್ಯರು ಪರಸ್ಪರ ಪ್ರೀತಿಸುವ ಸಮಾಜವನ್ನು ಗಟ್ಟಿಗೊಳಿಸೋಣ: ಸಿ.ಎಂ ಕರೆ*

    ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮನುಷ್ಯರು ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು‌. ಈ  ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಸಮಾಜ ಕಟ್ಟೋಣ ಎಂದು ಕರೆ ನೀಡಿದರು.

    ಅತ್ಯಂತ ಪ್ರಜ್ಞಾವಂತರೇ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗಳು ನಡೆಯಬಾರದು ಎಂದರು.‌

    *ನುಡಿದಂತೆ ನಡೆದಿದ್ದೇವೆ…ಹೇಳಿದ್ದನ್ನು ಮಾಡಿದ್ದೇವೆ*

    ನಾವು ನುಡಿದಂತೆ ನಡೆದಿದ್ದೇವೆ. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಕೊಡುವ ಭರವಸೆ ನೀಡಿದ್ದೆವು. ಅದರಂತೆ ಪುತ್ತೂರಿಗೂ ಮೆಡಿಕಲ್ ಕಾಲೇಜು ಕೊಟ್ಟಿದ್ದೇವೆ. ಸದ್ಯ 250 ಬೆಡ್ ಗಳ ಆಸ್ಪತ್ರೆ ಮಾಡ್ತೀವಿ. ಆಮೇಲೆ ಮತ್ತೆ 250 ಬೆಡ್ ಗಳನ್ನು ವಿಸ್ತರಿಸುತ್ತೇವೆ ಎಂದರು.

    Post Views: 4

    Demo
    Share. Facebook Twitter LinkedIn Email WhatsApp

    Related Posts

    ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: DCM ಡಿ.ಕೆ.ಶಿವಕುಮಾರ್!

    May 16, 2025

    ಕೋಲಾರ‌: ನಾನು ಸೈನಿಕರ ಬಗ್ಗೆ ಅಪಮಾನ ರೀತಿಯಲ್ಲಿ ಮಾತನಾಡಿಲ್ಲ : ಶಾಸಕ ಕೊತ್ತೂರು ಮಂಜುನಾಥ್!

    May 16, 2025

    Hubballi: ಪತ್ರಕರ್ತರು ವೃತ್ತಿ ನಿಷ್ಠೆ ಬೆಳೆಸಿಕೊಳ್ಳಿ: ರಾಜು ಅನಂತ ಸಾ ನಾಯಕವಾಡಿ ಸಲಹೆ!

    May 16, 2025

    ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ: ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ!

    May 16, 2025

    ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ – ಶಾಸಕ ಕೆ.ಎಂ.ಉದಯ್

    May 16, 2025

    ‘ಆಪರೇಷನ್ ಸಿಂದೂರ್ ಬೂಟಾಟಿಕೆ’ ಎಂದ ಕಾಂಗ್ರೆಸ್ ಶಾಸಕ! ಆಕ್ರೋಶ ಬೆನ್ನಲ್ಲೇ ಯುಟರ್ನ್

    May 16, 2025

    ಜನ ಮೋದಿಗೆ ಕ್ರೆಡಿಟ್ ಕೊಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ: ಕೈ ನಾಯಕರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    May 16, 2025

    ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ: ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ – ಸಿಎಂ ಸಿದ್ದರಾಮಯ್ಯ

    May 16, 2025

    SSLC ಪರಿಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ

    May 16, 2025

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ: ಸಾಧನಾ ಸಮಾವೇಶಕ್ಕೆ ಭರ್ಜರಿ ಸಿದ್ಧತೆ – ಡಿ.ಕೆ. ಶಿವಕುಮಾರ್ ಸ್ಥಳ ಪರಿಶೀಲನೆ.!

    May 16, 2025

    ರಾಹುಲ್‌ ಗಾಂಧಿ ಇರುವುದೇ ಜಾಮೀನಿನ‌ ಮೇಲೆ: ಅರವಿಂದ್ ಬೆಲ್ಲದ್

    May 16, 2025

    ಆಸ್ತಿ ಮಾಲೀಕರಿಗೆ ‘ಬಿ’ ಖಾತಾ ವಿತರಣೆ ಮಾಡಿದ ಪಂಚಾಯತ್ ಕಾರ್ಯಾಲಯ‌

    May 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.