ಡೇಂಜರ್, ಡೇಂಜರ್, ಡೇಂಜರ್.. ಸೇಫ್ ಅಲ್ಲ ಜನರೇ ವಾಟರ್ ಬಾಟಲ್. ಹಿಂದೆಲ್ಲಾ ಪನ್ನೀರ್, ಗೋಬಿ, ಕಬಾಬ್, ಕಲ್ಲಂಗಡಿ ಬಳಿಕ ಈಗ ಕುಡಿಯುವ ನೀರಿಗೂ ಕಂಟಕ ಶುರುವಾಗಿದೆ. ಬೇಸಿಗೆ ಶುರುವಾಯ್ತು ನೀರಿನ ಸಮಸ್ಯೆ ಸಾಮಾನ್ಯ ಬಿಡಿ ಅಂತ ಮುಂದೆ ಓದದೆ ಸುಮ್ಮನಾಗಬೇಡಿ. ನೀವು ಈ ಸುದ್ದಿ ಏದಲೇಬೇಕು.
ರೀಲ್ಸ್ ಸ್ಟಾರ್ಸ್‌ಗೆ ಖಾಕಿ ಬಿಸಿ..ಸೋನು ಗೌಡ ಸೇರಿದಂತೆ 100 ಮಂದಿಯನ್ನು ಬೆಂಡೆತ್ತಿದ ಪೊಲೀಸರು!
ಎಸ್, ಇತ್ತೀಚಿನ ದಿನಗಳಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಆಘಾತಕಾರಿ ವಿಚಾರಗಳು ಬಹಿರಂಗವಾಗುತ್ತಲೇ ಇವೆ. ಈಗ ವಾಟರ್ ಬಾಟಲ್ ಸರದಿ.
ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ ಕೂಡ ಇರುವುದಿಲ್ಲ. ಸಾಕಷ್ಟು ಕಂಪನಿಗಳ ವಾಟರ್ ಬಾಟಲ್ ಅಸುರಕ್ಷಿತ ಎಂದು ವರದಿ ತಿಳಿಸಿದೆ. ಜತೆಗೆ, ಕೋವಾ ಕೂಡ ಕಲಬೆರಕೆಯುಕ್ತ ಎಂದು ತಿಳಿಸಿದೆ.
ನಕಲಿ ವಾಟರ್ ಬಾಟಲ್ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಆಹಾರ ಇಲಾಖೆ ಸಮರ ಮುಂದುವರಿಸಿದೆ. ವಿವಿಧೆಡೆ ದಾಳಿ ನಡೆಸಿ ವಾಟರ್ ಬಾಟಲ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಸಿಹಿ ತಿಂಡಿಗಳಿಗೆ ಬಳಸುವ ಕೋವಾದಲ್ಲಿ ಕೂಡ ಕಲಬೆರಕೆ ಪತ್ತೆಯಾಗಿರುವುದಾಗಿ ಆಹಾರ ಇಲಾಖೆಯ ಪರೀಕ್ಷೆಯ ವರದಿ ತಿಳಿಸಿದೆ. ಇದರೊಂದಿಗೆ ಪನೀರ್ ನಂತರ ಇದೀಗ ಕೋವಾ ಕೂಡ ಆರೋಗ್ಯಕ್ಕೆ ಮಾರಕ ಎಂಬುದು ಬೆಳಕಿಗೆ ಬಂದಂತಾಗಿದೆ.
ಮತ್ತೊಂದೆಡೆ, ಈಗಾಗಲೇ ಪನೀರ್ ಮತ್ತು ಐಸ್ ಕ್ರೀಮ್ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿರುವ ಆಹಾರ ಇಲಾಖೆ ಇದೀಗ ಮತ್ತೊಂದು ಸುತ್ತಿನ ಕಾರ್ಯಾಚರಣೆ ಮುಂದುವರಿಸಿದೆ. ಬೆಂಗಳೂರಿನ ವಿವಿಧ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪನೀರ್ ಹಾಗೂ ಐಸ್ ಕ್ರೀಮ್ ಗಳಲ್ಲಿ ರಾಸಾಯನಿಕ ಬಳಕೆ ಆರೋಪದ ಹಿನ್ನೆಲೆಯಲ್ಲಿ ಇಲಾಖೆ ಈ ಕ್ರಮ ಕೈಗೊಂಡಿದೆ.
ಇಡ್ಲಿ, ಗೋಬಿ ಸೇರಿದಂತೆ ಅನೇಕ ಆಹಾರಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ಆಹಾರ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿತ್ತು. ಜತೆಗೆ, ಆಹಾರಗಳ ತಯಾರಿ ಹಾಗೂ ಮಾರಾಟ ಸಂಬಂಧ ಕೆಲವೊಂದು ಕಠಿಣ ನಿಯಮಗಳನ್ನು ಜಾರಿ ಮಾಡಿತ್ತು. ಆ ನಂತರ ಕುಡಿಯುವ ನೀರು ಸುರಕ್ಷಿತವೇ ಎಂಬ ಬಗ್ಗೆ ಪರಿಶೀಲನೆಗೆ ಮುಂದಾಗಿತ್ತು. ಇದೀಗ ಪರೀಕ್ಷಾ ವರದಿ ಬಂದಿದ್ದು, ಆಘಾತಕಾರಿ ವಿಚಾರ ಬಯಲಾಗಿದೆ.