ಬೆಂಗಳೂರು:- ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ಇಂದು ನಗರದ 57ನೇ ಸಿಸಿಹೆಚ್ ಕೋರ್ಟ್ಗೆ ಹಾಜರಾಗಬೇಕಾಗಿತ್ತು. ಆದರೆ ದರ್ಶನ್ ಮಾತ್ರ ವಿಚಾರಣೆಗೆ ಗೈರಾಗಿದ್ದರು.
ಇಂದು ದರ್ಶನ್ ಕೋರ್ಟ್ ವಿಚಾರಣೆಗೆ ಹಾಜರಾಗಲಿಲ್ಲ. ವಿಚಾರಣೆ ಸಂದರ್ಭದಲ್ಲಿ ವಕೀಲರು, ದರ್ಶನ್ ಅವರಿಗೆ ಬೆನ್ನು ನೋವಿದೆ. ಹೀಗಾಗಿ ವಿಚಾರಣೆಗೆ ಬರಲು ವಿನಾಯಿತಿ ಕೋರಿದರು.
ಈ ವೇಳೆ ನ್ಯಾಯಾಧೀಶರು ವಿಚಾರಣೆಗೆ ಆರೋಪಿಗಳು ಗೈರಾಗುವುದು ಸರಿಯಲ್ಲ. ವಿಚಾರಣೆಗೆ ಇದ್ದಾಗ ಆರೋಪಿಗಳು ಹಾಜರಾಗಲೇಬೇಕು. ವಿನಾಯಿತಿಗೆ ಮನವಿ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ದರ್ಶನ್ ಮನೆಯಿಂದ ಜಪ್ತಿ ಮಾಡಿಕೊಂಡಿದ್ದ 75 ಲಕ್ಷ ರೂ. ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್, ಆದಾಯ ತೆರಿಗೆ ಇಲಾಖೆ ವಾದ ಮಂಡಿಸಿದ ಬಳಿಕ ಆದೇಶ ನೀಡುವುದಾಗಿ ಹೇಳಿ ಮೇ 20ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು. ಈ ವೇಳೆ ತನಿಖೆ ವೇಳೆ ಜಪ್ತಿ ಮಾಡಿದ್ದ ಮೊಬೈಲ್‌ಗಳ ಹಿಂತಿರುಗಿಸಲು ಆರೋಪಿಗಳ ಪರ ವಕೀಲರು ಅರ್ಜಿ ಸಲ್ಲಿಸಿದರು.
ಇನ್ನೂ ಸದ್ಯ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಕೋರ್ಟ್ನಿಂದ ಅನುಮತಿ ಪಡೆದು ಹಲವು ರಾಜ್ಯಗಳನ್ನು ಸುತ್ತಿ ಬಂದಿದ್ದಾರೆ. ಇಂದು ಕೋರ್ಟ್ನಲ್ಲಿ ಮತ್ತೆ ಮುಖಾ ಮುಖಿಯಾಗಲಿದ್ದಾರೆ ಎನ್ನಲಾಗಿತ್ತು. ಆದ್ರೆ ದರ್ಶನ್ ಗೈರಾಗಿದ್ದರು. ಇನ್ನೂ ಹೈಕೋರ್ಟ್ನಿಂದ ಜಾಮೀನು ಪಡೆದಿರುವ ದರ್ಶನ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನು ರದ್ದುಗೊಳಿಸುವಂತೆ ಕೋರಿ ಪೊಲೀಸ್ ಅಧಿಕಾರಿಗಳು ಸುಪ್ರೀಂಕೋರ್ಟ್ಗೆ ಹೋಗಿದ್ದಾರೆ. ಈಗಾಗಲೇ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ, ಮುಂದಿನ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿಕೆ ಮಾಡಿದೆ.