ನಟ ದರ್ಶನ್ ಮತ್ತು ವಿಜಯಲಕ್ಷ್ಮೀ ಅವರ 22ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಇದೇ ಖುಷಿಯಲ್ಲಿ ಪತಿಯೊಂದಿಗಿನ ಫೋಟೋವನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ 2003ರ ಮೇ 19ರಂದು ಧರ್ಮಸ್ಥಳದಲ್ಲಿ ಮದುವೆ ಆಗಿದ್ದರು.
ಇವರಿಬ್ಬರು ಇದೀಗ 22ನೇ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಇದೇ ಖುಷಿಯಲ್ಲಿ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್‌ನಲ್ಲಿ ಪತಿ ದರ್ಶನ್ ಜೊತೆಗಿನ ಒಂದು ಸ್ಪೆಷಲ್ ಆಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ʻಶಾಶ್ವತ ಬಂಧʼ ಎಂದು ಕ್ಯಾಪ್ಶನ್ ಕೂಡ ಬರೆದುಕೊಂಡಿದ್ದಾರೆ.
View this post on Instagram
ಕಳೆದ ವರ್ಷ ಅಭಿಮಾನಿಗಳ ಜೊತೆ ದುಬೈನಲ್ಲಿ ದರ್ಶನ್ ಹಾಗೂ ವಿಜಯಲಕ್ಷ್ಮಿ ತಮ್ಮ ಮದುವೆ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದರು. ಇದೀಗ ವಿಜಯಲಕ್ಷ್ಮಿ ಅವರ ಪೋಸ್ಟ್ ಸಖತ್ ವೈರಲ್ ಆಗಿದ್ದು ಅಭಿಮಾನಿಗಳು ಬಗೆಬಗೆಯ ಕಾಮೆಂಟ್‌ಗಳನ್ನು ಮಾಡಿದ್ದಾರೆ. “ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಅಣ್ಣ-ಅತ್ತಿಗೆ. ನೂರು ಕಾಲ ಹೀಗೆ ಜೊತೆಯಾಗಿ ಬಾಳಿ.
22ನೇ ವಾರ್ಷಿಕೋತ್ಸವದ ಶುಭಾಶಯಗಳು. ನಿಮ್ಮಿಬ್ಬರ ದಾಂಪತ್ಯ ಜೀವನ ಸುಖಕರವಾಗಿರಲಿ. ಈ ಮುದ್ದಾದ ಜೋಡಿ ಮೇಲೆ ಯಾವ ಕೆಟ್ಟ ದೃಷ್ಟಿ ಬೀಳದಿರಲಿ. ಎಲ್ಲಾ ಸಮಯದಲ್ಲೂ ಜೊತೆ ಇರುವವಳು ನಿಜವಾದ ಮಡದಿ. ಪ್ರೀತಿ ಎಲ್ಲರೂ ಮಾಡುತ್ತಾರೆ ಆದರೆ ಆ ಪ್ರೀತಿನಾ ಕೊನೆಯವರೆಗೂ ಉಳಿಸಿಕೊಂಡು ಹೋಗುವುದೇ ನಿಜವಾದ ಪ್ರೀತಿ” ಎಂದೆಲ್ಲಾ ಅಭಿಮಾನಿಗಳು ಬರೆದುಕೊಂಡಿದ್ದಾರೆ.
ಅದಲ್ಲದೆ ‘ದರ್ಶನ್ ಅವರ ವಿವಾಹ ಆಮಂತ್ರಣ ಪತ್ರ ವೈರಲ್ ಆಗಿದೆ. 19-05-2003ರ ಸೋಮವಾರ ಬೆಳಿಗ್ಗೆ 9:10ರಿಂದ 9:50ರವರೆಗಿನ ಮಿಥುನ ಲಗ್ನದಲ್ಲಿ ನಾವು ವಿವಾಹವಾಗುತ್ತಿದ್ದೇವೆ. ಧರ್ಮಸ್ಥಳದ ವಸಂತ್ ಮಹಲ್ನಲ್ಲಿ ಮದುವೆ ನಡೆಯಲಿದೆ. ಎಲ್ಲರೂ ಮದುವೆಗೆ ಆಗಮಿಸಬೇಕು ಎಂದು ಆಮಂತ್ರಣ ಕೋರುತ್ತಿದ್ದೇನೆ’ ಎಂಬುದಾಗಿ ಆಮಂತ್ರಣ ಪತ್ರದಲ್ಲಿ ಬರೆಯಲಾಗಿತ್ತು.