ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕಮೀಷನರ್ ದಯಾನಂದ್ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರಿಗೆ ಹೊಸ ಕಮಿಷನರ್: ದಯಾನಂದ್ ಜಾಗಕ್ಕೆ ಸೀಮಂತ್ ಕುಮಾರ್ ನೇಮಿಸಿ ಸರ್ಕಾರ ಆದೇಶ!
ಇನ್ನೂ ರಾಜ್ಯ ಸರ್ಕಾರದ ಈ ನಡೆಯನ್ನು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಖಂಡಿಸಿದ್ದು, ಆಕ್ರೋಶ ಹೊರ ಹಾಕಿದ್ದಾರೆ. ಇದು ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸತ್ಯ ಹೇಳಿದ್ದಕ್ಕೆ ಇದು ಬಹುಮಾನ.. ಅವರು ಮತ್ತು ಅವರ ತಂಡ ಬೆಂಗಳೂರನ್ನು ಸುರಕ್ಷಿತವಾಗಿಡಲು ಇಡೀ ರಾತ್ರಿ ಶ್ರಮಿಸಿದ್ದರು. ಡೆತ್ ಮಾರ್ಚ್ ನ್ನು ಆಯೋಜಿಸಿ, ನಿಯಂತ್ರಿಸಲಾಗದ ಉಪಮುಖ್ಯಮಂತ್ರಿಯೇ ಪ್ರಮುಖ ಅಪರಾಧಿ. ಇದು ಕರ್ನಾಟಕದ ಎಲ್ಲರಿಗೂ ತಿಳಿದಿದೆ. ಯಾವುದೇ ಮುಖ್ಯಮಂತ್ರಿ ಇಷ್ಟು ಅಸಹಾಯಕ, ಹೇಡಿ, ಭಯಭೀತರಾಗಿರಲಿಲ್ಲ. ಸರ್ಕಾರವು ತನ್ನ ಕೈಗಳ ಮೇಲೆ ರಕ್ತವನ್ನು ಮೆತ್ತಿಕೊಂಡಿದೆ. ಇದೀಗ ಮೆದುಳನ್ನು ಕೂಡ ಸರ್ಕಾರ ಕಳೆದುಕೊಂಡಿದೆ. ಸರ್ಕಾರವು ಈಗ ವಿಪತ್ತಿನಲ್ಲಿದೆ ಎಂದು ಭಾಸ್ಕರ್ ರಾವ್ ಕಿಡಿಕಾರಿದ್ದಾರೆ.