ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ಡೆಲ್ಲಿ ಕ್ಯಾಪಿಟಲ್ ಟೂರ್ನಿಯಿಂದ ಹೊರ ಬಿದ್ದಿದೆ.
ಈ ಮೂರು ರಾಶಿಗೆ ಒಡಹುಟ್ಟಿದವರಿಂದ ಪ್ರೇಮಿಗಳ ಮದುವೆಗೆ ಸಂಪೂರ್ಣ ಬೆಂಬಲ: ಗುರುವಾರದ ರಾಶಿ ಭವಿಷ್ಯ 22 ಮೇ 2025
ಇತ್ತ ಮುಂಬೈ ಅಗ್ರ ನಾಲ್ಕು ತಂಡಗಳಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಇದರೊಂದಿಗೆ ಪ್ಲೇಆಫ್‌ಗೇರಿದ ಅಗ್ರ ನಾಲ್ಕು ತಂಡಗಳು ಯಾವುವು ಎಂಬುದು ಖಚಿತವಾಗಿದೆ.
ವಾಂಖೆಡೆಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತ ಮುಂಬೈ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕದ ಆಧಾರದ ಮೇಲೆ ಡೆಲ್ಲಿ ಕ್ಯಾಪಿಟಲ್ಸ್‌ಗೆ 181 ರನ್‌ಗಳ ಗುರಿಯನ್ನು ನೀಡಿತು. ಮುಂಬೈ ಪರ ಸೂರ್ಯಕುಮಾರ್ ಯಾದವ್ ಮತ್ತು ನಮನ್ ಧೀರ್ ಕೊನೆಯ 12 ಎಸೆತಗಳಲ್ಲಿ 48 ರನ್ ಗಳಿಸಿದರು. ವಾಸ್ತವವಾಗಿ ಮುಂಬೈಗೆ ಉತ್ತಮ ಆರಂಭ ಸಿಗಲಿಲ್ಲ. ಮಾಜಿ ನಾಯಕ ರೋಹಿತ್ ಶರ್ಮಾ ಕೇವಲ ಐದು ರನ್ ಗಳಿಸಿ ಔಟಾದರು. ಇವರ ನಂತರ, ವಿಲ್ ಜ್ಯಾಕ್ಸ್ ಮತ್ತು ರಯಾನ್ ರಿಕಲ್ಟನ್ ಜವಾಬ್ದಾರಿ ವಹಿಸಿಕೊಳ್ಳಲು ಪ್ರಯತ್ನಿಸಿದರು, ಆದರೆ ಜ್ಯಾಕ್ಸ್ 13 ಎಸೆತಗಳಲ್ಲಿ 21 ರನ್ ಗಳಿಸಿ ಔಟಾದರು. ರಿಕಲ್ಟನ್ ಕೂಡ ಕೇವಲ 25 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ತಿಲಕ್ ವರ್ಮಾ 27 ರನ್ಗಳಿಗೆ ಸುಸ್ತಾದರೆ, ನಾಯಕ ಹಾರ್ದಿಕ್ ಪಾಂಡ್ಯ ಮೂರು ರನ್ಗಳಿಗೆ ಸುಸ್ತಾದರು.
ಆದರೆ ಸೂರ್ಯಕುಮಾರ್ ಯಾದವ್ 43 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಆರು ಸಿಕ್ಸರ್‌ಗಳ ಸಹಾಯದಿಂದ ಅಜೇಯ 73 ರನ್ ಬಾರಿಸಿದರೆ, ನಮನ್ ಧೀರ್ ಎಂಟು ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಅಷ್ಟೇ ಸಿಕ್ಸರ್‌ಗಳ ಸಹಾಯದಿಂದ 24 ರನ್ ಗಳಿಸಿ ಅಜೇಯರಾಗಿ ಉಳಿದರು. ಇತ್ತ ಡೆಲ್ಲಿ ಪರ ಮುಖೇಶ್ ಕುಮಾರ್ ಎರಡು ವಿಕೆಟ್ ಪಡೆದರೆ, ದುಷ್ಮಂತ ಚಮೀರ, ಮುಸ್ತಾಫಿಜುರ್ ರೆಹಮಾನ್ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.