ಹಾನಗಲ್: “ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು” ಎಂದು ಹೇಳಿದರು.
ಮಗು ಆದ್ಮೇಲೆ Hair Fall ಜಾಸ್ತಿ ಆಗಿದ್ಯಾ!? ಹಾಗಿದ್ರೆ ತಪ್ಪದೇ ಆಹಾರದಲ್ಲಿ ಈ ವಸ್ತು ಸೇರಿಸಿ!
“665.75 ಕೋಟಿ ಹಣವನ್ನು ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು. 116 ಕೋಟಿ ವೆಚ್ಚದಲ್ಲಿ ಹಿರೇಕೌಂಶಿ ಮತ್ತು ಇತರೇ 9 ಗ್ರಾಮಗಳ 77 ಕೆರೆಗಳನ್ನು ತುಂಬಿಸುವ ಕೆಲಸ ನಾವು ಮಾಡುತ್ತಿದ್ದೇವೆ. 2018 ಕೋಟಿ ವೆಚ್ಚದ ವರದಾ ಮತ್ತು ಬೇಡ್ತಿ ನದಿ ಜೋಡಣೆ ವಿಚಾರವನ್ನು ರಾಷ್ಟ್ರೀಯ ನದಿ ಪ್ರಾಧಿಕಾರದ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ” ಎಂದರು.
“ರೈತರಿಗಾಗಿ ಹಾಲಿನ ಬೆಲೆ ಹೆಚ್ಚಳ ಮಾಡಿದ್ದೇವೆ. ಈ ಹಣವನ್ನು ಸರ್ಕಾರ ಏನಾದರೂ ತೆಗೆದುಕೊಂಡಿದೆಯೇ? ಇದನ್ನು ರೈತರಿಗೆ ನೀಡಿದ್ದೇವೆ. 30 ಸಾವಿರವಿದ್ದ 10 ಗ್ರಾಂ ಚಿನ್ನದ ಬೆಲೆ 1 ಲಕ್ಷಕ್ಕೆ ಏರಿದೆ. ದಿನಸಿ ವಸ್ತುಗಳು, ಕಬ್ಬಿಣ, ಸಿಮೆಂಟ್ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಾದಾಗ ಬಿಜೆಪಿಯವರು ಆಕ್ರೋಶ ವ್ಯಕ್ತಪಡಿಸಲಿಲ್ಲ.
ಈಗ ಕಾಂಗ್ರೆಸ್ ಮೇಲೆ ಆಕ್ರೋಶವಂತೆ. ಅವರು ಯಾವಾಗ ನಮ್ಮ ಮೇಲೆ ಆಕ್ರೋಶ ವ್ಯಕ್ತಪಡಿಸಿದರೋ ಅದೇ ದಿನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿತು. ಅಧಿಕಾರದಲ್ಲಿ ಇರುವ ನಾವು ನಿಮ್ಮ ನೆರವಿಗೆ ನಿಲ್ಲಬೇಕೆ ಹೊರತು ಪಿಕ್ ಪಾಕೆಟ್ ಮಾಡಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.