ಚಾಮರಾಜನಗರ:- ಕೊಳ್ಳೇಗಾಲ ನಗರಸಭೆಯಲ್ಲಿ ಸಾರ್ವಜನಿಕರ ಆಸ್ತಿಗಳಿಗೆ ಎ-ಖಾತೆ ಮತ್ತು ಬಿ-ಖಾತಾ ವನ್ನು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.
DC VS GT: ಬಟ್ಲರ್ ಅರ್ಧಶತಕ: ಡೆಲ್ಲಿ ವಿರುದ್ಧ 7 ವಿಕೆಟ್‌ಗಳ ರೋಚಕ ಜಯ ಸಾಧಿಸಿದ ಗುಜರಾತ್!
ನಗರಸಭೆ ಕಚೇರಿಯ ಮುಂಭಾಗದಲ್ಲಿ ಕೆ.ಅರ್.ಎಸ್ ಪಕ್ಷದ ಮುಖಂಡರು ಧಿಕ್ಕಾರ ಕೂಗುವ ಮೂಲಕ ಪ್ರತಿಭಟಿಸಿದರು.
ಪ್ರತಿಭಟನೆ ವೇಳೆಯಲ್ಲಿ ಮಾತನಾಡಿದ ಕೆ.ಆರ್.ಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಗಿರೀಶ್, ನಗರಸಭೆಯಲ್ಲಿ ಸುಮಾರು 400 ಜನರು ಕಂದಾಯ ಕಟ್ಟಿ ಖಾತೆ ಮಾಡಿಸಿಕೊಳ್ಳಲು ತಯಾರಿದ್ದಾರೆ. ಅಲ್ಲದೆ ಕಂದಾಯ ಕಟ್ಟಿದ ಮೂರು ತಿಂಗಳ ಅವಧಿಯೊಳಗೆ ಖಾತೆ ಮಾಡಬೇಕೆಂಬ ನಿಯಮವಿದ್ದರೂ ಕೂಡ ಅಧಿಕಾರಿಗಳು ಸಾರ್ವಜನಿಕರಿಗೆ ಖಾತೆ ಮಾಡುತ್ತಿಲ್ಲ. ಪ್ರತಿನಿತ್ಯ ಸಾರ್ವಜನಿಕರು ನಗರಸಭೆಗೆ ಅಲೆದು ಅಲೆದು ಸಾಕಾಗಿದೆ. ಹಾಗಾಗಿ ಸಾರ್ವಜನಿಕರ ದೂರುಗಳ ಆಧಾರದ ಮೇಲೆ ನಾವು ಸಾರ್ವಜನಿಕರ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಖಾತೆ ಮಾಡಿಕೊಡಬೇಕು ಇಲ್ಲವಾದಲ್ಲಿ ಅನಿರ್ಧಿಷ್ಟ ಅವಧಿ ಮುಷ್ಕರ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಗಣೇಶ್, ಜಿಲ್ಲಾ ಕಾರ್ಯದರ್ಶಿ ಶಿವಶಂಕರ್, ಮಧುನಾಯಕ ಇತರರು ಭಾಗವಹಿಸಿದ್ರು