Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

    By Author AINJune 9, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: “ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಬೆಂಗಳೂರಿನಲ್ಲಿ ಈ ಮಾದರಿ ಅಳವಡಿಸುವ ಬಗ್ಗೆ ಸಹೋದ್ಯೋಗಿಗಳ ಜತೆ ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿ ಮುನಿಸಿಪಲ್ ಕಾರ್ಪೋರೇಷನ್ ನ (MCD) ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೋಮವಾರ ಭೇಟಿ ನೀಡಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

    “ನಾನು ಇದುವರೆಗೂ ಪರಿಶೀಲನೆ ಮಾಡಿರುವ ಕಸ ವಿಲೇವಾರಿ ಕೇಂದ್ರಗಳ ಪೈಕಿ ಇದು ಅತ್ಯಾಧುನಿಕ ತಂತ್ರಜ್ಞಾನ ಹೊಂದಿದೆ. ಅತಿ ಕಡಿಮೆ ಪ್ರದೇಶದಲ್ಲಿ ಅತ್ಯುತ್ತಮವಾಗಿ ಕಸ ವಿಲೇವಾರಿ ಕೇಂದ್ರವನ್ನು ನಿರ್ವಹಿಸುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಈ ಹಿಂದೆ ಪ್ರಯೋಗಿಸಿದ್ದ 10ರಿಂದ 15 ಮೆ.ವ್ಯಾಟ್ ವಿದ್ಯುತ್ ಉತ್ಪಾದನಾ ಕೇಂದ್ರಗಳು ವಿಫಲವಾಗಿದ್ದವು. ಆದರೆ ಇಲ್ಲಿ 25 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ” ಎಂದು ವಿವರಿಸಿದರು.

    ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!

    “ಇಂತಹ ಅತ್ಯುತ್ತಮ ಕೇಂದ್ರವನ್ನು ಅಳವಡಿಸಿರುವ ಜಿಂದಾಲ್ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ಇಲ್ಲಿ ಅನಿಲ ಉತ್ಪಾದನೆಯನ್ನೂ ಮಾಡಲಾಗುತ್ತಿದೆ. ನಾನು ಈ ವಿಚಾರವಾಗಿ ಬೆಂಗಳೂರಿನಲ್ಲಿ ನಮ್ಮ ಸಹೋದ್ಯೋಗಿಗಳ ಜತೆ ಚರ್ಚೆ ಮಾಡುತ್ತೇನೆ. ಇಂದು ಈ ಕೇಂದ್ರಕ್ಕೆ ಭೇಟಿ ನೀಡಿರುವುದು ನನಗೆ ಒಂದು ಕಲಿಕಾ ಅನುಭವವನ್ನು ಕೊಟ್ಟಿದೆ” ಎಂದು ತಿಳಿಸಿದರು.

    “ಬೆಂಗಳೂರಿನ ಹೊರ ವಲಯದಲ್ಲಿ ನಾಲ್ಕು ಕಡೆಗಳಲ್ಲಿ ಕಸ ವಿಲೇವಾರಿ ಮಾಡಲು ತೀರ್ಮಾನಿಸಿದ್ದು, ಎರಡು ಕಡೆ ಟೆಂಡರ್ ಕರೆಯಲಾಗಿದೆ. ದೆಹಲಿಯಲ್ಲಿ ಹೊಸ ತಂತ್ರಜ್ಞಾನ ಪರಿಶೀಲನೆ ಮಾಡಲಾಗಿದೆ. ಚೆನ್ನೈನಲ್ಲಿ ಅನಿಲ ಉತ್ಪಾದನೆ, ಹೈದರಾಬಾದ್ ನಲ್ಲಿ ಅನಿಲ ಹಾಗೂ ವಿದ್ಯುತ್ ಎರಡನ್ನೂ ಉತ್ಪಾದನೆ ಮಾಡಲಾಗುತ್ತಿದೆ. ದೆಹಲಿಯ ಎನ್ ಸಿಆರ್ ನಲ್ಲಿರುವ ಈ ಕೇಂದ್ರದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ” ಎಂದರು.

    “ಬೆಂಗಳೂರಿನಲ್ಲಿ ಕಸ ವಿಲೇವಾರಿ ಮಾಡುವ ಜಾಗದ ಅಕ್ಕಪಕ್ಕದ ಪ್ರದೇಶದವರು ಕಸ ವಿಲೇವಾರಿಯಿಂದ ದುರ್ವಾಸನೆ ಬರುತ್ತದೆ ಎಂದು ವಿರೋಧಿಸುತ್ತಾರೆ. ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲೂ ಈ ಸಮಸ್ಯೆ ಎದುರಾಗುತ್ತಿದೆ. ದೆಹಲಿಯಲ್ಲಿ ದುರ್ವಾಸನೆರಹಿತವಾಗಿ ಈ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಬೆಂಗಳೂರಿನಲ್ಲಿ ನಿತ್ಯ 6 ಸಾವಿರ ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ದೆಹಲಿಯಲ್ಲಿನ ಮಾದರಿಯನ್ನು ಅಧಿಕಾರಿಗಳ ತಂಡದೊಂದಿಗೆ ಪರಿಶೀಲಿಸಿದ್ದೇವೆ. ರಸ್ತೆ ವಿಚಾರವಾಗಿ ದೆಹಲಿಯಲ್ಲಿ ಪ್ರತ್ಯೇಕ ನೀತಿ ರೂಪಿಸಿದ್ದು, ಇದರ ಪರಿಶೀಲನೆ ಮಾಡಲಾಗುವುದು” ಎಂದು ಹೇಳಿದರು.

    ಹೈಕಮಾಡ್ ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಈ ಬಾರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಕಷ್ಟವಾಗಲಿದೆ. ನಾಳೆ ಎತ್ತಿನಹೊಳೆ ಯೋಜನೆ ಸಂಬಂಧ ಸಿಎಂ ಸಭೆ ಕರೆದಿದ್ದು, ನಾನು ಈ ಸಭೆಯಲ್ಲಿ ಭಾಗವಹಿಸಬೇಕಿದೆ. ಹೀಗಾಗಿ ನಾನು ಬೆಂಗಳೂರಿಗೆ ಮರಳುತ್ತಿದ್ದೇನೆ” ಎಂದು ತಿಳಿಸಿದರು.

    ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ದು ಯಾರು ಎಂದು ಕೇಳಿದಾಗ, “ಅವರಿಗೆ ಆಹ್ವಾನ ಕೊಟ್ಟಿದ್ದು ಯಾರು ಎಂಬುದನ್ನು ರಾಜ್ಯಪಾಲರನ್ನೇ ಕೇಳಿ. ಕಾಲ್ತುಳಿತ ಪ್ರಕರಣದ ಬಗ್ಗೆ ಕುನ್ಹಾ ಅವರ ಆಯೋಗ ತನಿಖೆ ಮಾಡುತ್ತಿದ್ದು, ಅವರ ತನಿಖೆ ಮೇಲೆ ಪ್ರಭಾವ ಬೀರಬಾರದು. ಹೀಗಾಗಿ ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಪೋಟ: ನೌಕಾಪಡೆಯಿಂದ ರಕ್ಷಣೆ

    June 9, 2025

    RCB Parade Stampede Case: ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ!

    June 9, 2025

    Namo Drone Didi Scheme: ಮಹಿಳೆಯರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15 ಸಾವಿರ ನೀಡುವುದರ ಜೊತೆಗೆ 15 ದಿನಗಳ ಉಚಿತ ತರಬೇತಿ!

    June 9, 2025

    ಕನ್ನಡ ವಿರೋಧಿ ಕಮಲ್ ಹಾಸನ್’ಗೆ ಮತ್ತೆ ಮುಖಭಂಗ: ಸುಪ್ರೀಂ ಕೋರ್ಟ್’ನಲ್ಲೂ ಹಿನ್ನಡೆ

    June 9, 2025

    Corona Virus: ದೇಶದಲ್ಲಿ ಮುಂದುವರೆದ ಕೊರೋನಾ ವೈರಸ್ ಹಾವಳಿ: 24 ಗಂಟೆಗಳಲ್ಲಿ 358 ಜನರಲ್ಲಿ ಸೋಂಕು ದೃಢ

    June 9, 2025

    Gold Rate Today: ವಾವ್.. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! ಬಂಗಾರಪ್ರಿಯರು ಫುಲ್ ಖುಷ್

    June 9, 2025

    Apple iPhone: ಐಫೋನ್ ಪ್ರಿಯರಿಗೆ ಭರ್ಜರಿ ನ್ಯೂಸ್: ಮಾರುಕಟ್ಟೆಗೆ ಲಗ್ಗೆ ಇಟ್ಟ ಆಪಲ್ 17 ಸೀರೀಸ್..! ಬೆಲೆ ಎಷ್ಟು ಗೊತ್ತಾ?

    June 9, 2025

    ಮೇಘಾಲಯಕ್ಕೆ ಹನಿಮೂನ್ ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್: ಹೆಂಡ್ತಿ ಅರೆಸ್ಟ್!

    June 9, 2025

    11 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ನಮ್ಮ ಯೋಜನೆಗಳು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ – ಮೋದಿ!

    June 8, 2025

    ನಾಲ್ವರು ಕಾಮುಕರಿಂದ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್!

    June 8, 2025

    ಅನಾರೋಗ್ಯ ಸಮಸ್ಯೆ: ದಿಢೀರ್ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ!

    June 7, 2025

    Delhi CM: ದೆಹಲಿ ಸಿಎಂಗೆ ಬೆದರಿಕೆ: 25 ವರ್ಷದ ಯುವಕನ ಬಂಧನ

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.