ಚೆನ್ನೈ : ಮುಂಬರುವ ಲೋಕಸಭಾ ಚುನಾವಣೆ ವೇಳೆ ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರೋಧಿಸಿ ಚೆನ್ನೈನಲ್ಲಿ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಶುರುವಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹತ್ವದ ಸಭೆಯಲ್ಲಿ ರ್ನಾಟಕದ ಪ್ರತಿನಿಧಿಯಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿದ್ದಾರೆ.
ಈ ಸಭೆಯ ನೇತೃತ್ವ ವಹಿಸಿರುವ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್, ಅಲ್ಲಿನ ಡಿಸಿಎಂ ಉದಯನಿಧಿ ಸ್ಟಾಲಿನ್, ಕೇರಳ ಸಿಎಂ ಪಿಣರಾಯಿ ವಿಜಯನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಪಂಜಾಬ್ ಸಿಎಂ ಭಗವಂತ್ ಮಾನ್, ಒಡಿಶಾ ಮಾಜಿ ಸಚಿವ ಸಂಜಯ್ ಕುಮಾರ್ ದಾಸ್ ಮತ್ತಿತರರು ಪಾಲ್ಗೊಂಡಿದ್ದಾರೆ.
2026ರಲ್ಲಿ ನಡೆಯುವ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮಾಡಿರುವ ವಿರೋಧ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸ್ಟಾಲಿನ್ ಆರಂಭಿಸಿರುವ ಹೋರಾಟಕ್ಕೆ ರ್ನಾಟಕ ಸಹ ಧನಿಗೂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆಯಲ್ಲಿ ಭಾಗವಹಿಸಿದ್ದಾರೆ.
ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯನ್ನು ಕೇವಲ ಜನಸಂಖ್ಯೆ ಆಧಾರದ ಮೇಲೆ ನಡೆಸಿದರೆ ದಕ್ಷಿಣ ರಾಜ್ಯಗಳು ಸೇರಿಂದಂತೆ ಹಲವು ರಾಜ್ಯಗಳು ತಮ್ಮ ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುವ ಅಪಾಯವಿದೆ ಎಂಬುದರ ಬಗ್ಗೆ ಸಭೆಯಲ್ಲಿ ರ್ಚೆ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸುತ್ತಿರುವ ತಂತ್ರಕ್ಕೆ ಪ್ರತಿತಂತ್ರ ಹೂಡಲು ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ರಾಜ್ಯಗಳ ಮುಖಂಡರು ರಣತಂತ್ರ ಹೂಡಲು ಸಮಾಲೋಚನೆ ನಡೆಸಿದ್ದಾರೆ.