ಕೋಲಾರ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಅವುಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಶಿರಾ ಬಳಿ ಇಂಟರ್ ನ್ಯಾಷನಲ್ ಏರ್ಪೋರ್ಟ್ ನಿರ್ಮಾಣ ; ಗೃಹ ಸಚಿವರ ಪ್ರತಿಕ್ರಿಯೆ ಹೀಗಿತ್ತು..
ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ನೂತನ ಅಧ್ಯಕ್ಷ ವಿ.ಎಂ ಮುನಿಯಪ್ಪ, ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ವರ್ಷ ಜಾರಿಗೊಳಿಸಿದ ಐದು ಯೋಜನೆಗಳು ನಿರಂತರವಾಗಿ ಮುಂದುವರಿದಿವೆ. ರಾಜ್ಯಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸುವ ಮೂಲಕ ಯೋಜನೆ ಕ್ರಮಬದ್ಧವಾಗಿ ಜಾರಿಗೊಳ್ಳಲು ಸರ್ಕಾರ ಯತ್ನಿಸಿದೆ. ಯಾವುದೇ ಕಾರಣಕ್ಕೂ ಅರ್ಹರು ಯೋಜನೆಯಿಂದ ವಂಚಿತರಾಗಬಾರದು ಎನ್ನುವ ಧೈಯಕ್ಕೆ ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳು ಸಮಿತಿ ಸದಸ್ಯರು ಸಾರ್ವಜನಿಕರಿಗೆ ನ್ಯಾಯ ದೊರಕಿಸುವಲ್ಲಿ ಪ್ರಮಾಣಿಕ ಕೆಲಸ ಮಾಡಬೇಕು ಎಂದರು.