ನವದೆಹಲಿ: ಪ್ರಜಾಪ್ರಭುತ್ವವು ಜನರಿಗೆ ಮತ್ತು ಚುನಾಯಿತ ಪ್ರತಿನಿಧಿಗಳ ರಕ್ಷಣೆಯ ಭಂಡಾರವಾಗಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. ಸಾರ್ವಜನಿಕ ಪ್ರತಿನಿಧಿಗಳು ಚುನಾವಣೆಗಳ ಮೂಲಕ ಕೆಲವೊಮ್ಮೆ ತೀವ್ರವಾಗಿ ಹೊಣೆಗಾರರಾಗಿರುತ್ತಾರೆ.
ತುರ್ತು ಪರಿಸ್ಥಿತಿಯನ್ನು ವಿಧಿಸಿದ್ದಕ್ಕೆ ಪ್ರಧಾನ ಮಂತ್ರಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತಿತ್ತು. ಪ್ರಜಾಪ್ರಭುತ್ವವು ಜನರಿಗೆ ಮತ್ತು ಚುನಾಯಿತ ಪ್ರತಿನಿಧಿಗಳ ರಕ್ಷಣೆಯ ಭಂಡಾರವಾಗಿದೆ ಎಂದು ಅಭಿಪ್ರಾಯಪಟ್ಟರು.
ನೀವು ಯಾವಾಗಲೂ ಯಂಗ್ ಆಗಿ ಕಾಣಿಸ್ಬೇಕಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ಸಂಸತ್ತನ್ನು ಮೀರಿದ ಅಧಿಕಾರದ ಬಗ್ಗೆ ಸಂವಿಧಾನದಲ್ಲಿ ಯಾವುದೇ ಉಲ್ಲೇಖವಿಲ್ಲ. ಸಂಸತ್ತು ಸರ್ವೋಚ್ಚ. ಅದು ದೇಶದ ಪ್ರತಿಯೊಬ್ಬ ವ್ಯಕ್ತಿಯಂತೆ ಸರ್ವೋಚ್ಚವಾಗಿದೆ ಎಂದು ಹೇಳಿದರು.
ಧನಕರ್ ಅವರು ಈ ರೀತಿಯಾಗಿ ಹೇಳುತ್ತಿರುವುದು ಎರಡನೇ ಬಾರಿ. ಈ ಹಿಂದೆ ಕೋರ್ಟ್‌ಗಳು ಸೂಪರ್ ಪಾರ್ಲಿಮೆಂಟ್ ಆಗಬಾರದು. ಈಗ ಕಾರ್ಯಾಂಗ ಮತ್ತು ಶಾಸಕಾಂಗದ ಜಾಗದಲ್ಲಿ ನ್ಯಾಯಾಂಗದ ಪ್ರವೇಶವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.