ಧಾರವಾಡ: ಕರ್ನಾಕಟದ 5 ನಿಲ್ದಾಣಗಳು ಸೇರಿದಂತೆ ದೇಶದ 103 ನವೀಕೃತ ರೇಲ್ವೆ ನಿಲ್ದಾಣಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ನೀಡಿದ್ದಾರೆ. ಅಮೃತ ಭಾರತ ಸ್ಟೆಷನ್ ಯೋಜನೆಯಡಿ ಈ ರೈಲ್ವೆ ಸ್ಟೆಷನ್ ಗಳನ್ನು ಅಭಿವೃದ್ಧಿಪಡಿಸಲಾಗಿದೆ.
17 ಕೋಟಿ ವೆಚ್ಚದಲ್ಲಿ ಧಾರವಾಡ ರೇಲ್ವೇ ನಿಲ್ದಾಣವನ್ನ ಪುನರ್ ನಿರ್ಮಾಣ ಮಾಡಲಾಗಿದೆ. ಧಾರವಾಡದಲ್ಲಿ ನಡೆದ ರೈಲ್ವೆ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮವನ್ನು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೆರವೇರಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಅಮೃತ ದೇಸಾಯಿ, ಹುಡಾ ಅದ್ಯಕ್ಷ ಶಾಕೀರ್ ಸನದಿ, ನೈರುತ್ಯ ರೆಲ್ವೆ ನಿಲ್ದಾಣದ ವ್ಯವಸ್ಥಾಪಕ ನಿರ್ದೆಶಕ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸ್ವಂತ ಹಣದಿಂದ ರಸ್ತೆ ಗುಂಡಿ ಮುಚ್ಚಿಸಿದ ನಟ ವಿನೋದ್ ರಾಜ್…Video ವೈರಲ್!