ಧಾರವಾಡ: ಧಾರವಾಡ ಉಪನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಬೈಕ್ ಕಳ್ಳರನ್ನಿ ಬಂಧಿಸಿದ್ದು, ಬಂಧಿತರಿಂದ 3 ಲಕ್ಷ ರೂ. ಮೌಲ್ಯದ ಒಟ್ಟು 5 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗೆ ಧಾರವಾಡದಲ್ಲಿ ಬೈಕ್ ಕಳ್ಳತನ ಹೆಚ್ಚಾಗಿತ್ತು. ಕಳ್ಳರ ಮೇಲೆ ನಿಗಾವಹಿಸಿದ್ದ ಪೊಲೀಸರು ಕಳ್ಳರ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.
ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗೆ ಕೇಂದ್ರ ಸಚಿವೆ ರಕ್ಷಾ ಕಾಡ್ಸೆ ಭೇಟಿ: ಸಚಿವರಿಗೆ ಸಾಥ್ ನೀಡಿದ ಶಾಸಕ ಬೆಲ್ಲದ
ಎಸಿಪಿ ಪ್ರಶಾಂತ ಸಿದ್ದನಗೌಡರ ಮಾರ್ಗದರ್ಶನದಲ್ಲಿ ಸಿಪಿಐ ದಯಾನಂದ ಶೇಗುಣಸಿ, ಪಿಎಸ್‌ಐ ರುದ್ರಪ್ಪ ಗುಡದರಿ, ವಿ.ಐ.ಬಳ್ಳಾರಿ, ಸಿಬ್ಬಂದಿ ದಯಾನಂದ, ಮುಸ್ತಫಾ ಬೀಳಗಿ, ನಾಗರಾಜ ವಡ್ಡಪ್ಪಗೋಳ, ಪ್ರದೀಪ ಕುಂದಗೋಳ, ಹನುಮಂತ ಜಟ್ಟಣ್ಣವರ ಸೇರಿ ಇತರರು ಕಾರ್ಯಾಚರಣೆಯಲ್ಲಿ ನಡೆಸಿದ್ದಾರೆ. ಸದ್ಯ ಈ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.