ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಅನುಭವಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ 190 ರನ್ ಕಲೆಹಾಕಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ಕೊನೆಯ ಓವರ್ನಲ್ಲಿ ಪಂದ್ಯವನ್ನು ಗೆದ್ದುಕೊಂಡಿತು. ಪಂಜಾಬ್ ಪರ ಪ್ರಭ್ಸಿಮ್ರನ್ ಸಿಂಗ್ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕ ಇನ್ನಿಂಗ್ಸ್ ಆಡಿದರೆ, ಬೌಲಿಂಗ್ನಲ್ಲಿ ಮಿಂಚಿದ ಚಾಹಲ್ ಒಂದೇ ಓವರ್ನಲ್ಲಿ 4 ವಿಕೆಟ್ ಉರುಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಕರ್ತವ್ಯ ಮರೆತು ಬಸ್ ನಲ್ಲೇ ನಮಾಜ್ ಪ್ರಕರಣ: KSRTC ಚಾಲಕನ ವಿರುದ್ಧ ತನಿಖೆಗೆ ಆದೇಶಿಸಿದ ರಾಮಲಿಂಗಾ ರೆಡ್ಡಿ!
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ಉತ್ತಮ ಆರಂಭ ಪಡೆಯಲು ಸಾಧ್ಯವಾಗಲಿಲ್ಲ. ಶೇಖ್ ರಶೀದ್ 12 ಎಸೆತಗಳಲ್ಲಿ 11 ರನ್ ಗಳಿಸಿ ಔಟಾದರೆ, 3.1 ಓವರ್‌ಗಳಲ್ಲಿ, ಆಯುಷ್ ಮ್ಹಾತ್ರೆ ರೂಪದಲ್ಲಿ ಸಿಎಸ್‌ಕೆ ಎರಡನೇ ವಿಕೆಟ್ ಕಳೆದುಕೊಂಡತು. ಆದಾಗ್ಯೂ, ಮೂರನೇ ಕ್ರಮಾಂಕದಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ಸ್ಯಾಮ್ ಕರನ್ 47 ಎಸೆತಗಳಲ್ಲಿ 88 ರನ್ ಕಲೆಹಾಕಿದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು.
ಇವರಲ್ಲದೆ, ರವೀಂದ್ರ ಜಡೇಜಾ 12 ಎಸೆತಗಳಲ್ಲಿ 17 ರನ್ ಗಳಿಸಿದರೆ, ಡೆವಾಲ್ಡ್ ಬ್ರೆವಿಸ್ 26 ಎಸೆತಗಳಲ್ಲಿ 32 ರನ್ ಗಳಿಸಿ ಔಟಾದರು. ಒಟ್ಟಾರೆಯಾಗಿ, ಸ್ಯಾಮ್ ಕರನ್ ಹೊರತುಪಡಿಸಿ, ಸಿಎಸ್ಕೆಯ ಬೇರೆ ಯಾವುದೇ ಬ್ಯಾಟ್ಸ್‌ಮನ್ ಹೆಚ್ಚಿನ ಪರಿಣಾಮ ಬೀರಲು ಸಾಧ್ಯವಾಗಲಿಲ್ಲ. ಹೀಗಾಗಿ ಧೋನಿ ಸೇನೆ 19.2 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 190 ರನ್ ಗಳಿಸಿತು.
191 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡವು ಸಾಧಾರಣ ಆರಂಭವನ್ನು ಪಡೆಯಿತು. ಪಂಜಾಬ್ ತಂಡಕ್ಕೆ ಪ್ರಿಯಾಂಶ್ ಆರ್ಯ ರೂಪದಲ್ಲಿ ಮೊದಲ ಹೊಡೆತ ಬಿದ್ದಿತು. ಅವರು 15 ಎಸೆತಗಳಲ್ಲಿ 23 ರನ್ ಗಳಿಸಿ ಔಟಾದರು. ಆದರೆ, ಮತ್ತೊಬ್ಬ ಆರಂಭಿಕ ಪ್ರಭ್ಸಿಮ್ರನ್ ಸಿಂಗ್ 36 ಎಸೆತಗಳಲ್ಲಿ 54 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿಗಳು ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಇವರಲ್ಲದೆ ಶ್ರೇಯಸ್ ಅಯ್ಯರ್ ಕೂಡ ಅರ್ಧಶತಕ ಗಳಿಸಿದರು. ಅಯ್ಯರ್ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 72 ರನ್‌ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಈ ಇಬ್ಬರ ಆಟದಿಂದಾಗಿ ಪಂಜಾಬ್ ತಂಡ ಚೆನ್ನೈ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು