ವಿಜಯನಗರ:- 2023ರ ವಿಧಾನಸಭಾ ಚುನಾವಣೆ ಮುನ್ನ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಹೆಸರೇಳಿ ಅಧಿಕಾರಕ್ಕೆ ಬಂದಿತ್ತು. ಆ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದು. ಆದರೆ ಕಳೆದ ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ದುಡ್ಡು ಬಂದಿಲ್ಲ. ಇದಕ್ಕೆ ಮಹಿಳೆಯರು ವ್ಯಾಪಕ ಆಕ್ರೋಶ ಹೊರ ಹಾಕಿದ್ದಾರೆ.
ಮಳೆ ಅವಾಂತರ: ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ – ಸಿಟಿ ರವಿ!
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಡಿಕೆಶಿ, ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು.. ನಾವು ದುಡ್ಡು ಕೊಡ್ತಾ ಇರಬೇಕು. ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆನೇ ಹಣ ಬಂದುಬಿಡುತ್ತಾ? 2, 3, 5 ವರ್ಷ ಆಗುತ್ತೆ ಅಲ್ವಾ.. ಅದೇ ರೀತಿ ಇದೂ ಕೂಡ ಬಂದಾಗ ಬರುತ್ತೆ ಎಂದು ಹೇಳಿದ್ದಾರೆ.
ಡಿಕೆ ಶಿವಕುಮಾರ್ ಅವರ ಗೃಹಲಕ್ಷ್ಮಿ ಯೋಜನೆ ಬಗೆಗಿನ ಹೇಳಿಕೆಯ ಬಗ್ಗೆ ಜೆಡಿಎಸ್ ಕಿಡಿಕಾರಿದೆ. ಯೋಜನೆ ಆರಂಭದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರತಿ ತಿಂಗಳು ಹಣ ಖಾತೆಗೆ ಜಮೆಯಾಗುತ್ತದೆ ಎಂದು ಹೇಳಿರುವ ವಿಡಿಯೋ ಹಂಚಿಕೊಂಡು ಜೆಡಿಎಸ್ ಪ್ರಶ್ನೆ ಮಾಡಿದೆ. ಟ್ವೀಟರ್‌ನಲ್ಲಿ ಪೋಸ್ಟ್ ಮಾಡಿದವ ಜೆಡಿಎಸ್, ” ಸುಳ್ಳು ಹೇಳಿ ಯಾಮಾರಿಸುವುದು ಕಾಂಗ್ರೆಸ್‌ನ ಹುಟ್ಟು ಗುಣ. ಡಿಕೆ ಶಿವಕುಮಾರ್ ಅವರೇ ನಿಮಗೆ ಎಷ್ಟು ನಾಲಿಗೆ ? ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ನೇರವಾಗಿ ಮಹಿಳೆಯರ ಖಾತೆಗೆ ಹಾಕುತ್ತೇವೆ ಎಂದು ಅಂದು ನೀವು ಹೇಳಿದ್ದೀರಿ. ಈಗ ಆ ರೀತಿ ಹೇಳೇ ಇಲ್ಲ ಎಂದು ಉಲ್ಟಾ ಹೊಡೆಯುತ್ತಿದ್ದೀರಿಲ್ಲ ನಿಮಗೆ ನಾಚಿಕೆಯಾಗಲ್ವ ? ” ಎಂದು ಆಕ್ರೋಶ ವ್ಯಕ್ತಪಡಿಸಿದೆ.