ಬಹಳ ಹಿಂದಿನ ನಮ್ಮ ಪೂರ್ವಜರಂತೆ ನಮ್ಮ ಆರೋಗ್ಯ ಸರಿಯಾಗಿಲ್ಲ. ಇದಕ್ಕೆ ಕಾರಣಗಳು ಹಲವಾರು ಇರಬಹುದು. ಆದರೆ, ಇಂದಿನ ಪ್ರಪಂಚದಲ್ಲಿ ಉತ್ತಮ ಆರೋಗ್ಯವನ್ನು ಹೊಂದಬೇಕಾದರೆ ಬಹಳ ಕಷ್ಟ ಪಡಬೇಕು. ಹೀಗೆ ಆರೋಗ್ಯವನ್ನು ಕಳೆದುಕೊಳ್ಳುವುದರ ಬಗ್ಗೆ ಯೋಚಿಸಲು ಹೊರಟಾಗ ನಮಗೆ ಸಿಗುವ ಸಾಮಾನ್ಯವಾದ ಕಾರಣಗಳೆಂದರೆ ಅನಗತ್ಯ ತೂಕ ಗಳಿಕೆ, ದೇಹದಲ್ಲಿ ಹಾರ್ಮೋನುಗಳ ಬದಲಾವಣೆ, ಸರಿ ಇರದ ಆಹಾರ ಪದ್ಧತಿಗಳು, ನಮ್ಮ ಕೆಟ್ಟ ಜೀವನ ಶೈಲಿ, ಇಂದಿನ ನಮ್ಮ ಒತ್ತಡ, ಆತಂಕಗಳು, ಖಿನ್ನತೆ, ಮಾಲಿನ್ಯ. ಈ ತೊಂದರೆಗಳ ಬಗ್ಗೆ ನಾವು ಎಷ್ಟು ತಿಳಿಸಿ ಹೇಳಿದರೂ ಸಾಲದು.
ಮೈಸೂರಿನ ತೋಟದಲ್ಲಿ ಎತ್ತಿನ ಗಾಡಿ ಸವಾರಿ ಮಾಡಿದ ದರ್ಶನ್! ವಿಡಿಯೋ ವೈರಲ್!
ಬೇಸಿಗೆಯಲ್ಲಿ ದೇಹವನ್ನು ಕೂಲ್ ಆಗಿರಿಸಲು ಒಂದು ಗ್ಲಾಸ್ ಸೋಂಪು ನೀರನ್ನು ಕೂಡಾ ಸೇವನೆ ಮಾಡಬಹುದು. ಇದರಲ್ಲಿ ವಿಟಮಿನ್ಗಳು, ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಸತುವು ಮುಂತಾದ ಅನೇಕ ಪೋಷಕಾಂಶಗಳಿದ್ದು, ಇದು ಅನೇಕ ರೋಗಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ಸೋಂಪು ನೀರು ಒಂದು ನೈಸರ್ಗಿಕ ಪರಿಹಾರವಾಗಿದ್ದು, ಇದನ್ನು ನಿಯಮಿತವಾಗಿ ಸೇವನೆ ಮಾಡುವ ಮೂಲಕ ಬೇಸಿಗೆಯಲ್ಲಿ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.
ಬೇಸಿಗೆಯಲ್ಲಿ ಸೋಂಪು ನೀರು ಕುಡಿಯುವುದರಿಂದ ದೇಹವು ತಂಪಾಗುತ್ತದೆ. ಸೋಂಪು ತಂಪಾಗಿಸುವ ಪರಿಣಾಮವನ್ನು ಹೊಂದಿದ್ದು, ಇದು ದೇಹವನ್ನು ಒಳಗಿನಿಂದ ತಂಪಾಗಿಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಹೊಟ್ಟೆಯ ಉಷ್ಣತೆ ಮತ್ತು ಕಿರಿಕಿರಿಯನ್ನು ಶಮನಗೊಳಿಸುತ್ತದೆ. ಬೇಸಿಗೆಯಲ್ಲಿ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಶಾಖದ ಹೊಡೆತ ಮತ್ತು ತಲೆ ನೋವಿನಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
ಬೇಸಿಗೆಯಲ್ಲಿ ಸೋಂಪು ನೀರನ್ನು ಸೇವಿಸುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕ ಅಂಶ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಶೀತ ಮತ್ತು ಇತರ ವೈರಲ್ ಸೋಂಕುಗಳನ್ನು ದೇಹವನ್ನು ಬಾಧಿಸದಂತೆ ನೋಡಿಕೊಳ್ಳಬಹುದು.
ಬೇಸಿಗೆಯಲ್ಲಿ ಸೋಂಪು ನೀರನ್ನು ಕುಡಿಯುವುದು ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೂ ಕೂಡಾ ಪ್ರಯೋಜನಕಾರಿ. ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳಂತಹ ಅಂಶಗಳು ಸೋಂಪುಕಾಳಿನಲ್ಲಿದ್ದು, ಇದು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಮತ್ತು ಇದು ಕೂದಲನ್ನು ಬುಡದಿಂದ ಬಲಪಡಿಸಲು ಸಹಕಾರಿಯಾಗಿದೆ.
ಬೇಸಿಗೆಯಲ್ಲಿ ಸೋಂಪು ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್ ಇದ್ದು, ಇದು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಮಲಬದ್ಧತೆ, ಅಜೀರ್ಣ, ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಸೋಂಪು ನೀರು ನಿಮಗೆ ತುಂಬಾ ಪ್ರಯೋಜನಕಾರಿ. ಇದರ ಸೇವನೆಯಿಂದ ದೇಹದ ಚಯಾಪಚಯ ಕ್ರಿಯೆಯನ್ನು ಹೆಚ್ಚುತ್ತದೆ. ಇದು ದೇಹದಲ್ಲಿ ಸಂಗ್ರಹವಾಗುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಹಸಿವನ್ನು ಸಹ ನಿಯಂತ್ರಿಸುತ್ತದೆ.
ಸೋಂಪು ನೀರು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಇದು ಯಕೃತ್ತು ಮತ್ತು ಮೂತ್ರಪಿಂಡಗಳನ್ನು ಶುದ್ಧೀಕರಿಸಲು ಸಹ ಸಹಕಾರಿಯಾಗಿದೆ.
ನಿಮ್ಮ ದೇಹದಲ್ಲಿ ಅತಿಯಾದ ಉಷ್ಣತೆ ಇದ್ದರೆ ಬೇಸಿಗೆಯ ದಿನಗಳಲ್ಲಿ ಖಾಲಿ ಹೊಟ್ಟೆಗೆ ಸೋಂಪು ನೀರನ್ನು ಕುಡಿಯಬಹುದು. ಇದು ತಂಪಾಗಿಸುವ ಗುಣವನ್ನು ಹೊಂದಿರುವುದರಿಂದ, ಇದು ನಿಮ್ಮನ್ನು ದಿನವಿಡೀ ಹೈಡ್ರೇಟೆಡ್ ಆಗಿರುವಂತೆ ಮಾಡುತ್ತದೆ. ದೇಹವನ್ನು ತಂಪಾಗಿರಿಸುತ್ತದೆ.
ಸೋಂಪು ನೀರನ್ನು ತಯಾರಿಸಲು, ರಾತ್ರಿಯಲ್ಲಿ ಒಂದು ಚಮಚ ಸೋಂಪು ತೆಗೆದುಕೊಂಡು ಅದನ್ನು ಒಂದು ಲೋಟ ನೀರಿಗೆ ಹಾಕಿಡಿ. ಮರುದಿನ ಈ ನೀರನ್ನು ಶೋಧಿಸಿ ಕುಡಿಯಿರಿ. ಇಲ್ಲವೇ ಮೊದಲು ಒಂದು ಪಾತ್ರೆಯಲ್ಲಿ ಒಂದು ಲೋಟ ನೀರನ್ನು ಬಿಸಿ ಮಾಡಿ, ಅದಕ್ಕೆ 1 ಟೀಚಮಚ ಸೋಂಪು ಸೇರಿಸಿ ಚೆನ್ನಾಗಿ ಕುದಿಸಿ, ನಂತರ ಅದನ್ನು ಶೋಧಿಸಿ ಕುಡಿಸಿ.