ಬೆಂಗಳೂರು: ಮಹಿಳೆಯರ ಆರ್ಥಿಕ ಸ್ಥಿತಿಗೆ ಬಲ ನೀಡುವ ಗೃಹಲಕ್ಷ್ಮಿ ಯೋಜನೆ ರಾಜ್ಯದಾದ್ಯಂತ ವ್ಯಾಪಕವಾಗಿ ಪ್ರಚಾರದಲ್ಲಿದೆ. ಈ ಯೋಜನೆಯಡಿಯಲ್ಲಿ ನೊಂದಾಯಿಸಿಕೊಂಡ ಮಹಿಳೆಯರು ತಿಂಗಳಿಗೆ ₹2,000 ಪಡೆಯುತ್ತಿದ್ದಾರೆ. ಆದರೆ ಕೆಲವರ ಬ್ಯಾಂಕ್ ಖಾತೆಗೆ ಹಣ ಜಮೆಯಾಗದ ತೊಂದರೆಗಳು ಹೆಚ್ಚಾಗುತ್ತಿವೆ.
ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ. ಈಗ ಇರುವಂತೆ ವ್ಯವಸ್ಥೆ ಮುಂದುವರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?
ಗೃಹಲಕ್ಷ್ಮಿ ಹಣ ವಿಳಂಬದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗೃಹಲಕ್ಷ್ಮಿ ಹಣ ಬಿಡುಗಡೆಗೆ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ. ಏಪ್ರಿಲ್ ತಿಂಗಳವರೆಗೂ ಹಣ ಕ್ಲಿಯರ್ ಆಗಿದೆ. ಮೇ ತಿಂಗಳು ಮಾತ್ರ ಬಾಕಿ ಇದ್ದು ಪ್ರತಿ ತಿಂಗಳು ಹಣಕಾಸು ಇಲಾಖೆಗೆ ಹಣ ಬಿಡುಗಡೆ ಆಗುತ್ತಿದೆ ಎಂದರು.
ಈಗ ಹಣ ತಾಲೂಕು, ಜಿಲ್ಲಾ ಪಂಚಾಯತಿಗೆ ಸುತ್ತಾಡಿ ಬಿಡುಗಡೆ ಆಗಬೇಕಿದೆ. ಇದರಿಂದಾಗಿ ಒಂದು ವಾರ, ಎರಡು ವಾರ ತಡೆ ಆಗಬಹುದು ಅಷ್ಟೇ. ಬಾಕಿ ಹಣ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು. ಹಣಕಾಸು ಇಲಾಖೆ ಪ್ರತಿ ತಿಂಗಳು ಹಣ ನೀಡುತ್ತಿದೆ.
ಪ್ರತಿ ತಿಂಗಳು ಯಜಮಾನಿಯರು ಹೊಸದಾಗಿ ಸೇರುತ್ತಿದ್ದಾರೆ. ಈಗ 1.25 ಕೋಟಿ ಯಜಮಾನಿಯರು ಯೋಜನೆ ಅಡಿ ಇದ್ದಾರೆ. ನಮ್ಮ ಇಲಾಖೆಯಿಂದ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ. ಈಗ ಹೇಗೆ ಇದೆಯೋ ಹಾಗೆಯೇ ಮುಂದುವರೆಯುತ್ತಿದೆ ಅಂತ ಸ್ಪಷ್ಟಪಡಿಸಿದರು.