ಬೆಂಗಳೂರು:- ಕರ್ನಾಟಕ ರಾಜ್ಯ ಸರ್ಕಾರ ಅತ್ತ ಹಾಲು, ಬಸ್ ಪ್ರಯಾಣ ದರ, ಮೆಟ್ರೋ ದರ ಬಳಿಕ ಹಾಲು, ವಿದ್ಯುತ್ ದರ ಏರಿಸಿ ಶಾಕ್ ಕೊಟ್ಟಿತ್ತು. ಅಲ್ಲದೇ ಡೀಸೆಲ್ ಬೆಲೆಯನ್ನೂ 2ರೂ ಹೆಚ್ಚಳ ಮಾಡಿದೆ.
ಪಿಯುಸಿಯಲ್ಲಿ ಭಾಗ್ಯ ಮಗಳು ಡಿಸ್ಟಿಂಕ್ಷನ್..ತನ್ವಿ ಪಡೆದ ಅಂಕಗಳು ಎಷ್ಟು?
ಇದೀಗ ಡೀಸೆಲ್ ಬೆಲೆ ಹೆಚ್ಚಳದ ಹೊರೆಯನ್ನು ಪೋಷಕರ ಹೆಗಲಿಗೆ ಹಾಕಲು ಖಾಸಗಿ ಶಾಲಾ ವಾಹನ ಸಂಘ ನಿರ್ಧಾರ ಕೈಗೊಂಡಿದೆ. ಪ್ರತಿ ಲೀಟರ್ ಡೀಸೆಲ್ ದರ 2 ರೂ. ಏರಿಕೆಯಾದ ಹಿನ್ನೆಲೆಯಲ್ಲಿ ಶಾಲಾ ವಾಹನದ ಶುಲ್ಕವನ್ನು ಹೆಚ್ಚಿಸಲು ಸಂಘ ನಿರ್ಧಾರ ಕೈಗೊಂಡಿದೆ.
ಸದ್ಯ ತಿಂಗಳಿಗೆ 2,000 ರೂ – 3,000 ರೂ. ಶುಲ್ಕವಿದೆ. ದರ ಏರಿಕೆಯಿಂದ 2,500 ರೂ- 3,500 ರೂ.ಗೆ ಏರಿಕೆಯಾಗಲಿದೆ. ಇದೇ ಶೈಕ್ಷಣಿಕ ವರ್ಷದಿಂದ ನೂತನ ದರ ಜಾರಿಯಾಗಲಿದೆ. ಸದ್ಯ ಬೆಂಗಳೂರಲ್ಲೇ 7 ಸಾವಿರಕ್ಕೂ ಅಧಿಕ ಶಾಲಾ ವಾಹನಗಳು ಇವೆ. ಸಾವಿರಾರು ವಿದ್ಯಾರ್ಥಿಗಳು ಖಾಸಗಿ ವಾಹನದಲ್ಲೇ ನಿತ್ಯ ಶಾಲೆಗೆ ತೆರಳುತ್ತಿದ್ದಾರೆ.