ಚಾಮರಾಜನಗರ:- ಬೆಂಗಳೂರಿನಲ್ಲಿ ಐಪಿಎಲ್ ವಿಜಯೇತ ತಂಡ ಆರ್.ಸಿ.ಬಿ.ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ 11 ಜನರ ಸಾವು ಪ್ರಕರಣಕ್ಕೆ ಸಂಬಂದಿಸಿದಂತೆ
ಅಮಾಯಕ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಲು ನಾಯಕ ಜನಾಂಗದ ಮುಖಂಡ ಕೆಲ್ಲಂಬಳ್ಳಿ ಸೋಮನಾಯಕ ಹಾಗೂ ಬೆಂಬಲಿಗರು ಇಂದು ನಗರದಲ್ಲಿ ಆಗ್ರಹಿಸಿದರು.
ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್!
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಸೇರಿದಂತೆ 5 ಮಂದಿ ಅಧಿಕಾರಿಗಳ ಅಮಾನತು ಆದೇಶ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ನಾಯಕ ಜನಾಂಗದಿಂದ ಪ್ರತಿಭಟನೆ ನಡೆಯಿತು.
ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಕೆಲ್ಲಂಬಳ್ಳಿ ಸೋಮನಾಯಕ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ರಾಜ್ಯ ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವ ಜಿ.ಪರಮೇಶ್ವರ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ ಕೆಲ್ಲಂಬಳ್ಳಿ ಸೋಮನಾಯಕ ಮಾತನಾಡಿ,
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತ ಪ್ರಕರಣದ ನೇರ ಹೊಣೆಯನ್ನು ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕು. ಯಾವುದೇ ಮುನ್ಸೂಚನೆ ಇಲ್ಲದೆ ಪೊಲೀಸ್ ಅನುಮತಿ ಇಲ್ಲದೆ ಸ್ವಾರ್ಥಕ್ಕಾಗಿ ಸರ್ಕಾರ ತರಾತುರಿಯಲ್ಲಿ ಆರ್ಸಿಬಿ ವಿಜಯೋತ್ಸವ ಆಚರಣೆ ಮಾಡಿದ್ದು, ಕಾಲ್ತುಳಿತದಲ್ಲಿ 11 ಮಂದಿ ಅಮಾಯಕರನ್ನು ಬಲಿಪಡೆದಿದೆ. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕು. ರಾಜ್ಯ ಸರ್ಕಾರ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಈ ಪ್ರಕರಣದಲ್ಲಿ ಅಮಾಯಕ ಪೊಲೀಸ್ ಅಧಿಕಾರಿಗಳ ಅಮಾನತು ಪಡಿಸಿರುವುದು ಸರಿಯಲ್ಲ. ಅಧಿಕಾರಿಗಳ ಅಮಾನತು ಆದೇಶವನ್ನು ಹಿಂಪಡೆಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕೆಲ್ಲಂಬಳ್ಳಿ ಸೋಮನಾಯಕ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯ ಶಿವರಾಜ್, ಯ.ರಾಜುನಾಯಕ, ಸಂತೋಷ್, ಬುಲೆಟ್ ಚಂದ್ರು, ಚೇತು, ರಂಗಸ್ವಾಮಿ, ಚಂದು, ಬಸವರಾಜು, ಸತೀಶ್, ರಾಜು, ಶಂಕರ್, ಸೋಮು, ಶಿವಮೂರ್ತಿ, ಇತರರು ಭಾಗವಹಿಸಿದ್ದರು.