ಮೈಸೂರು: ಕಾಂಗ್ರೆಸ್ ಪಾಳಯದಲ್ಲಿ ಸೆಪ್ಟೆಂಬರ್ ಕ್ರಾಂತಿ. ಸಿಎಂ ಬದಲಾವಣೆ ಎಂಬ ಬಿರುಗಾಳಿ, ಕೆಪಿಸಿಸಿ ಪಟ್ಟಕ್ಕಾಗಿ ಪೈಪೋಟಿ ನಡೆಯುತ್ತಲೇ ಇದೆ. ಈ ಭಾರೀ ಬೆಳವಣಿಗೆಗಳು ನಡುವೆ ನಾನು ಮತ್ತು ಡಿಕೆ ಶಿವಕುಮಾರ್ ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮಿಬ್ಬರ ಮಧ್ಯೆ ತಂದಿಡುವ ಪ್ರಯತ್ನವನ್ನು ಮಾಡಿದರೂ ಅದು ಆಗುವುದಿಲ್ಲ. ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು ಎಂದು ಹೇಳಿದ್ದಾರೆ.
ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?
ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ. ಅದೇ ಸತ್ಯ ಎಂದು ಹೇಳುವ ಮೂಲಕ ಈ ಬಾರಿ ಸಿದ್ದರಾಮಯ್ಯ ದಸರಾ ಉದ್ಘಾಟನೆ ಮಾಡುವುದಿಲ್ಲ ಎಂದಿದ್ದ ಅಶೋಕ್ಗೆ ತಿರುಗೇಟು ನೀಡಿದ್ದಾರೆ.