ದೊಡ್ಡಬಳ್ಳಾಪುರ: ಬೆಂಗಳೂರು ಹಾಲು ಒಕ್ಕೂಟ, ಬಮೂಲ್ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಅದರಂತೆ ಬೆಂಗಳೂರು ಗ್ರಾಮಾಂತರ ದೊಡ್ಡ ಬಳ್ಳಾಪುರ ಬಮೂಲ್ ನಿರ್ದೇಶಕ ಚುನಾವಣೆಯಲ್ಲಿ ಬದ್ಧವೈರಿಗಳು ಮೈತ್ರಿ ಮಾಡಿಕೊಂಡಿದ್ದಾರೆ.
ಅತ್ತ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬದ್ಧ ವೈರಿಗಳಂತಿದ್ದರೆ,
ಇತ್ತ ಬಮೂಲ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಹುಬ್ಬೇರುವಂತೆ ಮಾಡಿದ್ದಾರೆ
ದೊಡ್ಡಬಳ್ಳಾಪುರ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಹುಸ್ಕೂರ್ ಆನಂದ್ ಗೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಿದೆ. ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ ಬಾಹ್ಯ ಬೆಂಬಲ ಘೋಷಣೆ ಮಾಡಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಿ.ಸಿ ಆನಂದ್ ಅವರನ್ನು ಸೋಲಿಸಲು ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಎಂದು ಮಾಜಿ ಶಾಸಕ ವೆಂಕಟರಮಣಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.
BREAKING NEWS: ರುಂಡ ಮುಂಡ ಕತ್ತರಿಸಿದ ರೀತಿ ಸೂಟ್ ಕೇಸ್‌ನಲ್ಲಿ 9 ವರ್ಷದ ಬಾಲಕಿ ಶವಪತ್ತೆ
ಕಳೆದ ಬಾರಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣೆ ಗೆದ್ದಿದ್ದ ಬಿ.ಸಿ ಆನಂದ್, ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು.