ಬೆಂಗಳೂರು:- ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಶಿಕ್ಷಣದ ಜೊತೆಗೆ ಸಂಸ್ಕಾರವು ಮುಖ್ಯ:: ಶ್ರೀ ಡಾ. ಮಹಾಂತಪ್ರಭು ಸ್ವಾಮೀಜಿಗಳು!
ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಐಪಿಎಸ್ ಅಧಿಕಾರಿ, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿತ್ತು.
ಇಂದು ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿದೆ.
ಡಾ. ಅಲೋಕ್ ಮೋಹನ್ ಅವರಿಗೆ ಗೌರವ ಪಥಸಂಚಲನ ಮೂಲಕ ಬೀಳ್ಕೊಡಲಾಗುತ್ತದೆ. ಅಲೋಕ್ ಮೋಹನ್ ಅವರ ಅವಧಿ ಏಪ್ರಿಲ್ಗೆ ಮುಕ್ತಾಯವಾಗಿದ್ದರೂ ಡಿಜಿಪಿಯಾಗಿ ಎರಡು ವರ್ಷದ ಅವಧಿ ಮುಗಿಸುವ ಉದ್ದೇಶದಿಂದ ಮೂರು ವಾರಗಳ ಕಾಲ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿತ್ತು.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.